ಸ್ವಯಂ ಪ್ರೇರಣೆಯಿಂದ ಜಾಗ್ರತೆ ವಹಿಸಿ

18CBP3MaskDay
Published on

ಚಿಕ್ಕಬಳ್ಳಾಪುರ : ಕರೊನಾ ಸೋಂಕು ತಗುಲದಿರಲು ಜನರೇ ಸ್ವಯಂ ಪ್ರೇರಣೆಯಿಂದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಸಲಹೆ ನೀಡಿದರು.

ಜಿಲ್ಲಾಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ ಗುರುವಾರ ಕೈಗೊಂಡಿದ್ದ ಮಾಸ್ಕ್ ದಿನ ಆಚರಣೆ ಕುರಿತ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಕರೊನಾ ಸೋಂಕು ಪ್ರಕರಣಗಳು ಹೆಚ್ಚಿಗೆ ವರದಿಯಾಗುತ್ತಿವೆ. ಇದರ ನಿಯಂತ್ರಣಕ್ಕೆ ಸರ್ಕಾರ ಶ್ರಮಿಸುತ್ತಿದೆ. ಇದಕ್ಕೆ ಜನರ ಸಹಕಾರವೂ ಅಗತ್ಯ. ಸದಾ ಎಚ್ಚರಿಕೆ ವಹಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವಿಕೆ, ಸ್ವಚ್ಛತೆಯೇ ಸೋಂಕು ಹರಡುವಿಕೆ ತಡೆಗೆ ಪ್ರಮುಖ ಮಾರ್ಗಗಳು. ಇದು ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳು ನಿರಂತರವಾಗಿ ಪತ್ತೆಯಾಗುತ್ತಿದ್ದರೂ ಹೆಚ್ಚಿನ ಜನರಿಗೆ ಸೋಂಕು ಗುಣವಾಗುತ್ತಿದೆ. ಈಗಾಗಲೇ ಬಹುತೇಕರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದಕ್ಕೆ ಜನರು ಆತಂಕಪಡುವ ಅವಶ್ಯಕತೆ ಇಲ್ಲ. ಆದರೆ, ನಿರ್ಲಕ್ಷೃ ತೋರಬಾರದು ಎಂದು ಹೇಳಿದರು.

ಜಿಪಂ ಸಿಇಒ ಬಿ.ೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಜಿಲ್ಲಾ ಶಸ ಚಿಕಿತ್ಸಕ ರಮೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಯಲ್ಲಾ ರಮೇಶ್, ಪೌರಾಯುಕ್ತ ಲೋಹಿತ್ ಮತ್ತಿತರರು ಇದ್ದರು.

ಸೋಂಕು ಲಕ್ಷಣಗಳಿದ್ದಲ್ಲಿ ಜಿಲ್ಲಾಸ್ಪತ್ರೆಗೆ ಬನ್ನಿ : ನೆಗಡಿ, ಕೆಮ್ಮು, ಜ್ವರ ಮತ್ತು ತೀವ್ರ ಉಸಿರಾಟ ತೊಂದರೆಯ ಲಕ್ಷಣಗಳು ಕಂಡು ಬಂದ ತಕ್ಷಣ ಜಿಲ್ಲಾಸ್ಪತ್ರೆಯಲ್ಲಿ ಕರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೊರಗಡೆ ಓಡಾಡಬಾರದು. ಹಾಗೆಯೇ ಇತರೆ ಜನರೊಂದಿಗೆ ಬೆರೆಯಬಾರದು. ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವುದರ ಜತೆಗೆ ಇತರರಿಗೆ ಹರಡದಿರಲು ಎಚ್ಚರಿಕೆ ವಹಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಬಿ.ಎಂ.ಯೋಗೀಶ್ ಗೌಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net