

ಚಿತ್ರದುರ್ಗ ವೀರಶೈವ ಸಮಾಜ, ಪ್ರಥಮ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದೊಂದಿಗೆ ವಿಶ್ವಗುರು ಬಸವೇಶ್ವರ ಜಯಂತಿ ಅಂಗವಾಗಿ ಮೇ 10ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಬೆಳಗ್ಗೆ 9ರಿಂದ 12.30ರ ವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗೆ 9611432527, 8618669347 ಸಂಪರ್ಕಿಸಬಹುದು ಎಂದು ಸಂಸ್ಥೆ ಅಧ್ಯಕ್ಷ ನಂಜುಂಡೇಶ್ವರ ತಿಳಿಸಿದ್ದಾರೆ.