ಸ್ವಾಂತ್ರೊೃೀತ್ಸವದಲ್ಲಿ ಕಾಣದ ಅಂಬೇಡ್ಕರ್, ಗಾಂಧೀಜಿ ಭಾವಚಿತ್ರ

Kollegala Issue
ಕೊಳ್ಳೇಗಾಲ ಪಟ್ಟಣದ ಅಸ್ಸಿಸ್ಸಿ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಬಿ. ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಇಟ್ಟಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ಬಿಇಒ ಮಂಜುಳಾ ಅವರಿಗೆ ದೂರು ಸಲ್ಲಿಸಿದರು. ಚೇತನ್ ದೊರೈರಾಜ್, ಚಂದ್ರು, ಅನೀಶ್ ಇತರರಿದ್ದರು.
Published on

ಕೊಳ್ಳೇಗಾಲ: ಪಟ್ಟಣದ ಅಸ್ಸಿಸ್ಸಿ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಸ್ವಾತಂತ್ರೊೃೀತ್ಸವ ಕಾರ್ಯಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರವನ್ನು ಇಟ್ಟಿಲ್ಲವೆಂದು ಆರೋಪಿಸಿ ಸಾರ್ವಜನಿಕರು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದರು.

ಬುಧವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ತೆರಳಿದ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೈರಾಜ್, ಚಂದ್ರು, ಅನೀಶ್, ಸಂಜಯ್, ಅಶೋಕ್ ಇತರರು ಬಿಇಒ ಮಂಜುಳಾ ಅವರಿಗೆ ದೂರು ಸಲ್ಲಿಸಿದರು. ಅಸ್ಸಿಸ್ಸಿ ಪ್ರೌಢಶಾಲೆಯಲ್ಲಿ ನಡೆದ ಸ್ವಾಂತಂತ್ರೃ ದಿನಾಚರಣೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರವನ್ನು ಇಡದೆ ಸಾಮಾಜಿಕ ನ್ಯಾಯಕ್ಕೆ ಧಕ್ಕೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಅಸ್ಸಿಸ್ಸಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನದ ಕಾರ್ಯಕ್ರಮ ಮಾಡುವಾಗ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಅವರ ಫೋಟೋ ಇಡಲಾಗಿಲ್ಲ ಎಂಬುದಾಗಿ ದೂರು ಬಂದಿದೆ. ಸದ್ಯ ಶಾಲೆಗೆ ನೋಟಿಸ್ ನೀಡಲಾಗುತ್ತದೆ. ಆನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

> ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿ, ಕೊಳ್ಳೇಗಾಲ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net