

ಹುಮನಾಬಾದ್: ಸ್ವಾತಂತ್ರಕ್ಕಾಗಿ ತ್ಯಾಗ ಬಲಿದಾನ ಮಾಡಿದ ಸೇನಾನಿಗಳ ಬಗ್ಗೆ ಮಕ್ಕಳಿಗೆ ತಿಳಿಸಬೇಕಿದೆ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಹೇಳಿದರು.
ಪಟ್ಟಣದ ತಹಸಿಲ್ ಕಚೇರಿಯಲ್ಲಿ ಸೋಮವಾರ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತ್ಯುತ್ಸವದಲ್ಲಿ ಮಾತನಾಡಿ, ಸ್ವಾತಂತ್ರÈ ಸೇನಾನಿಗಳನ್ನು ಗೌರವಿಸುವ ಕಾರ್ಯ ತಾಲೂಕು ಆಡಳಿತದಿಂದ ನಡೆಯಬೇಕು ಎಂದರು.
ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಗಮನ ಹರಿಸಲಾಗುತ್ತಿದ್ದು, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುತ್ತಿದೆ. ಹುಮನಾಬಾದ್ ಹಾಗೂ ಚಿಟಗುಪ್ಪ ತಾಲೂಕು ಬರ ಘೋಷಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ ಎಂದರು. ಶ್ರೀ ಶ್ರೀನಿವಾಸ ಸ್ವಾಮೀಜಿ ಆಶೀರ್ವಚನ ನೀಡಿ, ಸ್ವಾತಂತ್ರಕ್ಕಾಗಿ ಜೀವನವನ್ನೇ ತ್ಯಾಗ ಮಾಡಿದ ಹೋರಾಟಗಾರರ, ವಿಶ್ವಕರ್ಮರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸಾಹಿತಿ ಕಾಶಿನಾಥ ರಡ್ಡಿ ಉಪನ್ಯಾಸ ನೀಡಿದರು. ತಹಸೀಲ್ದಾರ್ ಅಂಜುಮ್ ತಬಸುಮ್, ಗ್ರೇಡ್- ೨ ತಹಸೀಲ್ದಾರ್ ಮಂಜುನಾಥ ಪಂಚಾಳ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ನಾಗಶೆಟ್ಟಿ ಡುಮಣಿ ಇತರರಿದ್ದರು.