ಸ್ವಾತಂತ್ರೃ ದಿನ ಅಂಗವಾಗಿ ಜಾಥಾ

14-npk-1
ನಾಪೋಕ್ಲುವಿನಲ್ಲಿ ಸೋಮವಾರ ನಡೆದ ಜಾಥಾದಲ್ಲಿ ದೇಶದ ಸ್ವಾತಂತ್ರ್ಯಹೋರಾಟಗಾರರ ವೇಷಧರಿಸಿದ ವಿದ್ಯಾರ್ಥಿಗಳು ವೀಕ್ಷಕರ ಗಮನ ಸೆಳೆದರು. ಗ್ರಾ.ಪಂ. ಅಧ್ಯಕ್ಷೆ ಪಾರ್ವತಿ, ಮೊಹಮ್ಮದ್, ಚೋದಕ್ಕಿ ಇತರರು ಇದ್ದಾರೆ.
Published on

ನಾಪೋಕ್ಲು: ಸ್ವಾತಂತ್ರೃ ಅಮೃತ ಮಹೋತ್ಸವದ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ನಾಪೋಕ್ಲು ಗ್ರಾಮ ಪಂಚಾಯಿತಿ ವತಿಯಿಂದ ವಿವಿಧ ಶಾಲೆಗಳ ಸಹಯೋಗದೊಂದಿಗೆ ಪಟ್ಟಣದಲ್ಲಿ ಸೋಮವಾರ ಜಾಥಾ ನಡೆಯಿತು.

ವಿದ್ಯಾರ್ಥಿಗಳು ರಾಷ್ಟ್ರಭಕ್ತಿಯ ಘೋಷವಾಕ್ಯಗಳನ್ನು ಮೊಳಗಿಸಿದರು. ನಾಪೋಕ್ಲು ಮಾರುಕಟ್ಟೆ ಬಳಿಯಿಂದ ಆರಂಭಗೊಂಡ ಜಾಥಾ ಪಟ್ಟಣದ ಮುಖ್ಯ ರಸ್ತೆಯ ಮೂಲಕ ಬಸ್ ನಿಲ್ದಾಣದ ವರೆಗೆ ಸಾಗಿತು. ಸ್ವಾತಂತ್ರೃ ಹೋರಾಟಗಾರರ ವೇಷಧರಿಸಿದ ವಿದ್ಯಾರ್ಥಿಗಳು ವೀಕ್ಷಕರ ಗಮನ ಸೆಳೆದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ, ಉಪಾಧ್ಯಕ್ಷ ಮೊಹಮ್ಮದ್, ಪಿಡಿಒ ಚೋಂದಕ್ಕಿ, ಪಂಚಾಯಿತಿ ಸದಸ್ಯರು, ಕರ್ನಾಟಕ ಪಬ್ಲಿಕ್ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು, ಇಂಟರಾಕ್ಟ್ ಕ್ಲಬ್ ಸದಸ್ಯರು, ನಿಸರ್ಗ ಇಕೋ ಕ್ಲಬ್ ಸದಸ್ಯರು, ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಬೇತು, ಚೆರಿಯಪರಂಬು, ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net