ಸ್ವಾತಂತ್ರೃ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ : ಶಾಸಕ ಮಂಜುನಾಥ್ ಕರೆ

05 HANUR 2.
Published on
  • ಚಾಮರಾಜನಗರ : ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವುದರ ಮೂಲಕ ಸ್ವಾತಂತ್ರೃ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
  • ಹನೂರು ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಶನಿವಾರ ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಆಯೋಜಿಸಿದ್ದ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
  • ತಾಲೂಕು ಕೇಂದ್ರದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಆದ್ದರಿಂದ ಆಯಾ ಇಲಾಖೆಯ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ನಿಭಾಯಿಸುವುದರ ಮೂಲಕ ಯಾವುದೇ ಲೋಪವಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಈ ದಿಸೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಶಾಮಿಯಾನ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತರಬೇಕು ಎಂದು ಹೇಳಿದರು.

  • ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಕಾರ್ಯದರ್ಶಿ ಬಿಇಒ ಶಿವರಾಜು ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಿದರಲ್ಲದೆ ತಹಸೀಲ್ದಾರ್ ಗುರುಪ್ರಸಾದ್ ಆಯಾ ಇಲಾಖೆ ವಹಿಸಬೇಕಾದ ಜವಾಬ್ದಾರಿಗಳನ್ನು ಮನವರಿಕೆ ಮಾಡಿದರು.
  • ಸಭೆಯಲ್ಲಿ ಪ.ಪಂ. ಮುಖ್ಯಾಧಿಕಾರಿ ಮಹೇಶ್‌ಕುಮಾರ್, ಅಗ್ನಿಶಾಮಕ ಠಾಣಾಧಿಕಾರಿ ಪ್ರಶಾಂತ್‌ನಾಯಕ್, ಉಪ ನೋಂದಣಾಧಿಕಾರಿ ಉಷಾ, ವೈದ್ಯೆ ಪುಷ್ಪರಾಣಿ, ಕೃಷಿ ಅಧಿಕಾರಿ ರಘುವೀರ್, ಶಿರಸ್ತೇದಾರ್ ನಾಗೇಂದ್ರ, ಆರ್‌ಐ ಮಹದೇವಸ್ವಾಮಿ, ಗ್ರಾಮಲೆಕ್ಕಿಗ ಶೇಷಣ್ಣ, ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net