

ಸಾಲಿಗ್ರಾಮ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯಾವುದೇ ದೋಷಗಳಿಲ್ಲದೆ ಯಶಸ್ವಿಯಾಗಿ ನಡೆಸಲು ಎಲ್ಲ ಅಧಿಕಾರಿಗಳು ಶ್ರಮ ವಹಿಸಬೇಕು ಎಂದು ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ತಿಳಿಸಿದರು.
ಸಾಲಿಗ್ರಾಮ ತಾಲೂಕು ಕಚೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸಬೇಕು. ಈ ಬಗ್ಗೆ ಯಾವುದೇ ಅಧಿಕಾರಿಯೂ ನಿರ್ಲಕ್ಷೃ ವಹಿಸುವಂತಿಲ್ಲ. ಪೂರ್ವಭಾವಿ ಸಭೆಗೆ ಕೆಲ ಇಲಾಖೆ ಅಧಿಕಾರಿಗಳು ಗೈರಾಗಿದ್ದು, ಈ ಬಗ್ಗೆ ವರದಿ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.
ಸ್ವಾತಂತ್ರ್ಯ ಹೋರಾಟಗಾರರು, ನಾಡು-ನುಡಿಗೆ ಕೊಡುಗೆ ನೀಡಿದ ಮಹಾನ್ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು. ಅಂತಹ ವ್ಯಕ್ತಿಗಳನ್ನು ಸ್ಥಳೀಯ ಮಟ್ಟದಲ್ಲಿ ಗುರುತಿಸಲು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಗ್ರೇಡ್2 ತಹಸೀಲ್ದಾರ್ ಕೆ.ಎನ್. ಮೋಹನ್ ಕುಮಾರ್, ಗ್ರಾಪಂ ಅಧ್ಯಕ್ಷೆ ಫಾತಿಮಾ ಉನ್ನಿಸಾ, ಉಪಾಧ್ಯಕ್ಷೆ ಶಶಿಕಲಾ, ಮಾಜಿ ಉಪಾಧ್ಯಕ್ಷೆ ಸುಧಾ ರೇವಣ್ಣ, ಪಿಡಿಒ ಮಂಜುನಾಥ್. ಉಪತಹಸೀಲ್ದಾರ್ ಮಹೇಶ್, ಶಿವಕುಮಾರ್, ಕೃಷ್ಣಮೂರ್ತಿ, ಶಂಕರ್, ಮಹೇಶ್ ಇತರರು ಇದ್ದರು.