ಸ್ವಾತಂತ್ರ್ಯ ಅಮೃತ ಮಹೋತ್ಸವ ಸ್ಮರಣೀಯವಾಗಿಸಲು ಪಾದಯಾತ್ರೆ

25 TKE 3 web
Published on

ತರೀಕೆರೆ: ಸ್ವಾತಂತ್ರ್ಯ ಅಮೃತ ಮಹೋತ್ಸವ ಸ್ಮರಣೀಯಗೊಳಿಸುವ ಸಲುವಾಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಗುರುವಾರ ಲಕ್ಕವಳ್ಳಿಯಿಂದ ಪಟ್ಟಣದ ಮಹಾತ್ಮ ಗಾಂಧಿ ವೃತ್ತದವರೆಗೆ ಪಾದಯಾತ್ರೆ ನಡೆಸಲಾಯಿತು. ಸ್ವಾತಂತ್ರ್ಯ ನಡಿಗೆ ಹೆಸರಿನಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮುಖಂಡರು, ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ಪಾಲ್ಗೊಂಡು ಲಕ್ಕವಳ್ಳಿಯಿಂದ ಪಟ್ಟಣದ ಮಹಾತ್ಮ ಗಾಂಧಿ ವೃತ್ತದವರಗೆ ಹೆಜ್ಜೆ ಹಾಕಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಮಾಹಿತಿ ಜನರಿಗೆ ತಿಳಿಸಲು ಪಕ್ಷದಿಂದ ಜಾಥಾ ನಡೆಸಲಾಗಿದೆ ಎಂದರು. ದೇಶದ ಪ್ರತಿ ಪ್ರಜೆಗೂ ಸ್ವಾತಂತ್ರ್ಯ ಹಕ್ಕು ನೀಡಲು ಪಕ್ಷ ಶ್ರಮಿಸಿದೆ. ಮಾಜಿ ಪ್ರಧಾನಿಗಳಾದ ಲಾಲ್​ಬಹಾದುರ್ ಶಾಸ್ತ್ರಿ ಅವರ ಜೈ ಜವಾನ್ ಜೈ ಕಿಸಾನ್ ಘೊಷಣೆ ಮತ್ತು ಇಂದಿರಾ ಗಾಂಧಿ ಅವರ 20 ಅಂಶಗಳ ಕಾರ್ಯಕ್ರಮಗಳು ದೇಶದ ಅಭಿವೃದ್ಧಿಗೆ ಸಹಕಾರಿಯಾಗಿದ್ದವಾದರೂ ಬಿಜೆಪಿ ಸರ್ಕಾರ ಸಂವಿಧಾನವನ್ನೇ ತಿರುಚುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಲಿದ್ದು, ಜಿಲ್ಲೆಯ ಬಹುತೇಕ ಕ್ಷೇತ್ರದಲ್ಲಿ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net