

ಹಾಸಣ: ನಗರದ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಆ.15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಸೂಚಿಸಿದರು..
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಸ್ವಾತಂತ್ರ್ಯ ದಿನಾಚರಣೆಗೆ ಕೈಗೊಂಡಿರುವ ಸಿದ್ದತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದ ಯಶಸ್ವಿಗಾಗಿ ಈಗಾಗಲೇ ರಚಿಸಿರುವ ಸಮಿತಿಗಳು ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ಕರ್ತವ್ಯ ನಿಭಾಯಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳ ಕುರಿತು ಸ್ತಬ್ದ ಚಿತ್ರಗಳನ್ನು ಸಂಬಂದಪಟ್ಟ ಇಲಾಖೆ ಅಧಿಕಾರಿಗಳು ಮುತುರ್ವಜಿ ವಹಿಸಿ ಮಾಡಿಸುವಂತೆ ಸೂಚಿಸಿದರು.
ಸಭೆೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಂ.ಶಿವಣ್ಣ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆ ಭಾಗವಹಿಸಿದ್ದರು.