ಸ್ವಾತಂತ್ರ್ಯ ಹೋರಾಟಕ್ಕೆ ಚನ್ನಮ್ಮ ಸ್ಫೂರ್ತಿ

23ard1
ಔರಾದ್ ತಾಲೂಕಿನ ಸಂತಪುರ ಗ್ರಾಪಂನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವದಲ್ಲಿ ತಾಪಂ ಇಒ ಮಾಣಿಕರಾವ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ , ಪಿಡಿಒ ಸಂತೋಷ ಪಾಟೀಲ್, ಚಂದ್ರಕಾಂತ ಪಾಟೀಲ್, ಬಸ್ವಂತರಾವ ಪಂಚಾಳ, ಶಂಕರ ಸ್ವಾಮಿ ಇದ್ದರು.
Published on

ಔರಾದ್: ಸ್ವಾತಂತ್ರ್ಯಕ್ಕಾಗಿ ಕೆಚ್ಚೆದೆಯಿಂದ ಹೋರಾಡಿದ ಕನ್ನಡ ನಾಡಿನ ಹೆಮ್ಮೆಯ ಮಹಿಳೆ ರಾಣಿ ಚನ್ನಮ್ಮಳ ಅಗಾಧ ದೇಶಪ್ರೇಮ ಎಲ್ಲರಿಗೂ ಮಾದರಿಯಾಗುವಂಥದ್ದು ಎಂದು ತಾಪಂ ಇಒ ಮಾಣಿಕರಾವ ಪಾಟೀಲ್ ಹೇಳಿದರು.

ಸಂತಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತನ್ನ ಪರಾಕ್ರಮದ ಮೂಲಕ ಬ್ರಿಟಿಷರ ಎದೆ ನಡುಗಿಸಿದ ವೀರ ಮಹಿಳೆ ಕಿತ್ತೂರು ಚನ್ನಮ್ಮ ಸಮಸ್ತ ನಾರಿ ಕುಲಕ್ಕೆ ಆದರ್ಶವಾಗಿದ್ದಾಳೆ. ಅಂತಹ ಮಾತೆ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಮಾತನಾಡಿ, ದೇಶಕ್ಕಾಗಿ ಬ್ರಿಟಿಷರ ವಿರುದ್ಧ ಯುದ್ಧದ ಕಹಳೆ ಊದಿ ಸ್ವಾತಂತ್ರ್ಯದ ಕಿಡಿ ಹೊತ್ತಿಸಿದ ವೀರವನಿತೆ ಕಿತ್ತೂರು ರಾಣಿ ಚನ್ನಮ್ಮ. ಇಂದಿನ ಮಹಿಳೆಯರು ಅವರ ಜೀವನ ಚರಿತ್ರೆ ಅಧ್ಯಯನ ಮಾಡುವ ಅಗತ್ಯವಿದೆ ಎಂದರು.

ಪಿಡಿಒ ಸಂತೋಷ ಪಾಟೀಲ್, ಚಂದ್ರಕಾಂತ ಪಾಟೀಲï, ಬಸ್ವಂತರಾವ ಪಂಚಾಳ, ಶಂಕರ ಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net