ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಪಾಲಿಸೋಣ

15ATHANIGRAMIN1
Published on

ಅಥಣಿ ಗ್ರಾಮೀಣ: ಅಸಂಖ್ಯಾತ ಜನರು ಜೀವನ ಮುಡಿಪಾಗಿಟ್ಟು ಹೋರಾಡಿದ ಫಲದಿಂದ ನಮಗೆ ಸ್ವಾತಂತ್ರ‍್ಯ ಸಿಕ್ಕಿದೆ ಎಂದು ಕೆಪಿಸಿಸಿ ಸದಸ್ಯ ಶಾಮರಾವ ಪೂಜಾರಿ ಹೇಳಿದರು.

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಗ್ರಾಪಂ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಾತಂತ್ರ‍್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಿರಿಯರು ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಕೊಡಿಸಿದ್ದಾರೆ. ಸ್ವಾತಂತ್ರ್ಯ ಸೇನಾನಿಗಳ ಆದರ್ಶ ಅಳವಡಿಸಿಕೊಳ್ಳಬೇಕು ಎಂದರು.

ಜಿಪಂ ಮಾಜಿ ಸದಸ್ಯ ಸಿದ್ದಪ್ಪ ಮುದಕಣ್ಣವರ ಮಾತನಾಡಿ, ಗ್ರಾಮದ ಅಭಿವೃದ್ಧಿಯಲ್ಲಿ ಯಾರೂ ರಾಜಕೀಯ ಮಾಡದೆ ಒಗ್ಗಟ್ಟಾಗಿ ಶ್ರಮಿಸೋಣ ಎಂದರು.

ವೇದಮೂರ್ತಿ ಗುರುಮೂರ್ತಯ್ಯ ಕಾಡದೇವರಮಠ ಆಶೀರ್ವಚನ ನೀಡಿದರು.

೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಗ್ರಾಮದ ಎಲ್ಲ ಶಾಲೆ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಗ್ರಾಪಂ ಅಧ್ಯಕ್ಷೆ ಶಾನವ್ವ ಪೂಜಾರಿ, ಪ್ರಾಚಾರ್ಯ ಸುರೇಶ ನಾಯಿಕ, ಉಪಪ್ರಾಚಾರ್ಯ ಅನಿಲ ಮೇಲಿನಕೇರಿ, ಗ್ರಾಪಂ ಉಪಾಧ್ಯಕ್ಷ ಅರ್ಜುನ ಪೂಜಾರಿ, ಮಲ್ಲಿಕಾರ್ಜುನ ಪರಾಂಡೆ, ಅನಿಲ ಮುಳಿಕ, ಸುಭಾಷ ಸೋನಕರ, ನಾನಾಸಾಬ ವೀರಗೌಡ, ಬಾಳಾಸಾಬ ಪೂಜಾರಿ, ಸದಾಶಿವ ಮುದಕಣ್ಣವರ, ತಾಪಂ ಅಽಕಾರಿ ಮಹಿಬುಬ್ ಖೋತವಾಲ್, ಗುರು ಸೋಮಣ್ಣವರ, ವಿಶ್ವನಾಥ ಮಠಗಾರ, ಗ್ರಾಪಂ ಕಾರ್ಯದರ್ಶಿ ಜಯಪಾಲ ದುರ್ಗಣ್ಣವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net