ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ಹೋರಾಟಗಾರರನ್ನು ಸ್ಮರಿಸಿ: ತಹಸೀಲ್ದಾರ್ ಶೋಭಾಲಕ್ಷ್ಮೀ

SOR WEB
Published on

ಸೊರಬ: ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಪ್ರತಿಯೊಬ್ಬರು ಜಾತಿ-ಮತ ಭೇದ ತೊರೆದು ಒಗ್ಗೂಡಬೇಕು ಎಂದು ತಹಸೀಲ್ದಾರ್ ಎಚ್. ಶೋಭಾಲಕ್ಷ್ಮೀ ಹೇಳಿದರು.

ಡಾ.ರಾಜ್ ಕಲಾಕ್ಷೇತ್ರದ ಮುಂಭಾಗ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ,

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಪ್ರಜಾಪ್ರಭುತ್ವದ ದೇಶದಲ್ಲಿ ಜನಿಸಿದ ನಾವುಗಳು ಪುಣ್ಯವಂತರು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ಹೋರಾಟಗಾರರನ್ನು ಪ್ರತಿಯೊಬ್ಬರು ಸ್ಮರಿಸಬೇಕು. ಸ್ವಾತಂತ್ರದ ಅಮೃತ ಮಹೋತ್ಸವವನ್ನು ವಿಶೇಷಗೊಳಿಸಲು ಕೇಂದ್ರ ಸರ್ಕಾರ ಹರ್ ಘರ್ ತಿರಂಗಾ ಅಭಿಯಾನ ನಡೆಸಿದ ಪರಿಣಾ, ಪ್ರತಿ ಮನೆ ಮನೆಗಳಲ್ಲೂ ಸ್ವಾತಂತ್ರ್ಯದ ಕಹಳೆ ಮೊಳಗಿಸಿತು ಎಂದರು.

ಶಾಸಕ ಕುಮಾರ್ ಬಂಗಾರಪ್ಪ ಮಾತನಾಡಿ, ಪ್ರತಿಯೊಬ್ಬ ಭಾರತೀಯರು 75ನೇ ಸ್ವಾತಂತ್ರ್ಯೋತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತ್ಯಾಗ, ಬಲಿದಾನ ಮಾಡಿದ್ದಾರೆ. ಅವರನ್ನು ಸ್ಮರಿಸುವ ಕೆಲಸವಾಗುತ್ತಿದೆ ಎಂದು ಹೇಳಿದರು.

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net