ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ನಮ್ಮೆಲ್ಲರ ಭಾಗ್ಯ: ಭಾನುಪ್ರಕಾಶ್

SOR WEB 2
Published on

ಸೊರಬ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಮಾಡುತ್ತಿರುವುದು ನಮ್ಮೆಲ್ಲರ ಭಾಗ್ಯ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಭಾನುಪ್ರಕಾಶ್ ಹೇಳಿದರು.

ಡಾ.ರಾಜ್ ಕಲಾಕ್ಷೇತ್ರದಲ್ಲಿ ತಾಲೂಕಿನ ವಿವಿಧ ಸಂಘ-ಸಂಸ್ಥೆ, ಸಮುದಾಯಗಳ ಸಹಕಾರದೊಂದಿಗೆ ಮನೆ ಮನೆಗೂ ರಾಷ್ಟ್ರಧ್ವಜ ಅಭಿಯಾನ ಯಶಸ್ವಿಗೊಳಿಸುವ ಕುರಿತು ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ತಹಸೀಲ್ದಾರ್ ಎಚ್.ಎಸ್.ಶೋಭಾಲಕ್ಷ್ಮೀ ಮಾತನಾಡಿ, ವಿದ್ಯಾರ್ಥಿಗಳಿಂದ ಜಾಥಾ ನಡೆಸಿದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ. ಸೊರಬದಲ್ಲಿ ಪುರಸಭೆಯಿಂದ 5 ಸಾವಿರ, ತಾಪಂನಿಂದ 15,700 ಹಾಗೂ ಆನವಟ್ಟಿ ಪಪಂನಿಂದ 4 ಸಾವಿರ ಬಾವುಟಗಳನ್ನು ವಿತರಿಸಲಾಗುವುದು ಎಂದರು.

ವಿವಿಧ ಸಂಘ-ಸಂಸ್ಥೆಗಳು, ಸಮುದಾಯದವರಿಗೆ ರಾಷ್ಟ್ರಧ್ವಜ ವಿತರಿಸಲಾಯಿತು. ಶಾಸಕ ಕುಮಾರ್ ಬಂಗಾರಪ್ಪ, ತಾಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಾಥ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಕಡಸೂರು, ಮಲ್ಲಿಕಾರ್ಜುನ ವೃತ್ತಿಕೊಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net