

ಯಾದಗಿರಿ: ಹೆಚ್ಚುತ್ತಿರುವ ಜನಸಂಖ್ಯೆಯಿಂದ ದೇಶದಲ್ಲಿ ಆಥರ್ಿಕ, ಸಾಮಾಜಿಕ ಮತ್ತು ವಸತಿ ಸಮಸ್ಯೆಗಳು ಉಂಟಾಗಿ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ಜಿಲ್ಲಾಕಾರಿ ಸ್ನೇಹಲ್ ಆರ್., ಕಳವಳ ವ್ಯಕ್ತಪಡಿಸಿದರು.
ನಗರದ ಸಕರ್ಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳನ್ನು ಪಡೆಯುವುದು ಆಯ್ಕೆಯಾಗಬೇಕೆ ಹೊರತು ಅನಿವಾರ್ಯವಾಗಿರಬಾರದು. ಪ್ರತಿಯೊಬ್ಬರಿಗೂ ಘನತೆಯಿಂದ ಜೀವಿಸುವ ಹಕ್ಕಿದೆ. ಕೌಟುಂಬಿಕ ವಿಚಾರಗಳಲ್ಲಿಯೂ ಸಹ ಪ್ರತಿಯೊಬ್ಬ ಮಹಿಳೆಗೂ ಸ್ವಂತ ನಿಧರ್ಾರ ಕೈಗೊಳ್ಳುವಂಥ ಸ್ವಾತಂತ್ರ್ಯ ಹಕ್ಕು ಕಾರ್ಯರೂಪಕ್ಕೆ ಬರುವಂತಾಗಬೇಕು ಎಂದು ಪ್ರತಿಪಾದಿಸಿದರು.
ಜನಸಂಖ್ಯೆ ಹೆಚ್ಚಳದಿಂದ ಸಮಾಜದ ಅಭಿವೃದ್ಧಿಗೆ ಪೆಟ್ಟು ಬೀಳುತ್ತಿದೆ. ಜಾಗತೀಕರಣ ಇಂದಿನ ತಂತ್ರಜ್ಞಾನದ ಯುಗದಲ್ಲಿ ನಾವು ಹಿಂದಿನ ಕಾಲದ ಮೌಢ್ಯ ಮತ್ತು ಕಂದಾಚಾರಗಳನ್ನು ಬಿಡಬೇಕಿದೆ. ಸಕರ್ಾರದ ನಿಯಮಗಳನ್ನು ಪಾಲಿಸಿ ದೇಶದ ಅಭಿವೃದ್ಧಿಗೆ ಸಹಕಾರ ಕೊಡಬೇಕಿದೆ ಎಂದರು.
ಶಿಕ್ಷಣದಿಂದ ಮಾತ್ರ ಇಂಥ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿನ ಜನತೆ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಬೇಕಿದೆ. ಜನಸಂಖ್ಯೆ ನಿಯಂತ್ರಣದ ಬಗ್ಗೆ ಆರೋಗ್ಯ ಇಲಾಖೆ ಅಕಾರಿಗಳು ಸಹ ಅರಿವು ಮೂಡಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ಜಿಪಂ ಸಿಇಒ ಗರೀಮಾ ಪನ್ವಾರ ಮಾತನಾಡಿ, ಜನಸಂಖ್ಯಾ ನಿಯಂತ್ರಣದ ಕ್ರಮಗಳನ್ನು ಪ್ರತಿಯೊಬ್ಬರ ಜೀವನದಲ್ಲೂ ಅಳವಡಿಸಿಕೊಳ್ಳಬೇಕು. ಮದುವೆ ಮಾಡಿಕೊಳ್ಳುವ ವರನಿಗೆ 21 ಹಾಗೂ ವಧುವಿಗೆ 18 ವರ್ಷ ತುಂಬಿರಬೇಕು. ಇಬ್ಬರ ನಡುವೆ 4 ವರ್ಷದ ಅಂತರ ಇರಬೇಕು. ಯುವಜನತೆಯ ಸಬಲೀಕರಣ ಮತ್ತು ಶಿಕ್ಷಣ ಇಲಾಖೆಯಿಂದ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು ಅಂದಾಗ ಮಾತ್ರ ಜನಸಂಖ್ಯೆ ತಡೆಗಟ್ಟಲು ಸಾಧ್ಯ ಎಂದು ಹೇಳಿದರು.
ಯವಕರು ಸಮಾಜದಲ್ಲಿ ಒಳ್ಳೆ ನಾಗರೀಕರಾಗಿ ಬೆಳೆಯಬೇಕು. ಜನಸಂಖ್ಯಾ ಸ್ಪೋಟದಿಂದಾಗುವ ಅಪಾಯಗಳು, ಲಿಂಗ ಅಸಮಾನತೆ, ಬಡತನ, ಶಿಶು ಮರಣ ಮತ್ತಿತರ ಸಂಗತಿಗಳನ್ನು ಅರಿತುಕೊಳ್ಳಬೇಕು. ಜನಸಂಖ್ಯೆ ಹೆಚ್ಚಿದಂತೆ ಭೂಮಿ ಹೆಚ್ಚಳವಾಗಲ್ಲ. ಇದು ನೈಸಗರ್ಿಕ ಅಸಮತೋಲನಕ್ಕೆ ಕಾರಣವಾಗಲಿದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪ್ರಭಾರಿ ಜಿಲ್ಲಾ ಶಸ್ತ್ರ ಚಿಕಿತ್ಸೆಕರಾದ ಡಾ.ರಿಜ್ವಾನಾ ಆಫ್ರೀನ್ ಅವರು ಜನಸಂಖ್ಯಾ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಆರೋಗ್ಯಾಕಾರಿ ಡಾ.ಗುರುರಾಜ ಹಿರೇಗೌಡ, ಜಿಲ್ಲಾ ಕುಟುಂಬ ಕಲ್ಯಾಣಾಕಾರಿ ಡಾ.ಮುಬಶಿರ್ ಅಹ್ಮದ್, ಜಿಲ್ಲಾ ಅಂಧತ್ವ ನಿಯಂತ್ರಾಣಾಕಾರಿ ಡಾ.ಲಕ್ಷ್ಮೀಕಾಂತ್ ಒಂಟಿಪೀರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಕಾರಿ ಡಾ.ಸಂಜೀವಕುಮಾರ, ಪ್ರಾಚಾರ್ಯ ರುದ್ರಗೌಡ ಪಾಟೀಲ್, ನಿರ್ಮಲಾ ಸಿನ್ನೂರ್, ಡಾ.ಹಣಮಂತರೆಡ್ಡಿ ಇದ್ದರು.