ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮೊಹಮ್ಮದ್ ನಲಪಾಡ್

55
Published on

ಮೈಸೂರು: ನಗರದ ಸರ್ಕಾರಿ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಸ್ವಾತಂತ್ರೊೃೀತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿರುವುದು ಅಚ್ಚರಿ ಮೂಡಿಸಿದೆ.


ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರೃ ದಿನಾಚರಣೆಯಲ್ಲಿ ಜನಪ್ರತಿನಿಧಿಯಲ್ಲದ, ಸಾಂವಿಧಾನಿಕ ಹುದ್ದೆಯನ್ನೂ ಹೊಂದಿರದ ನಲಪಾಡ್ ಪಾಲ್ಗೊಂಡಿದ್ದಾರೆ. ಜತೆಗೆ, ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಭಾಷಣವನ್ನೂ ಮಾಡಿ ಅವರೊಂದಿಗೆ ಸೆಲ್ಫಿ ತೆಗೆಸಿಕೊಂಡಿದ್ದಾರೆ.


ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶಗೌಡ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಸದಸ್ಯ ಗೋಪಿ, ನಟಿ ಕಾವ್ಯಾಶೆಟ್ಟಿ, ಕಾಲೇಜಿನ ಬೋಧಕರು-ಬೋಧಕೇತರ ಸಿಬ್ಬಂದಿ ಇದ್ದರು.


ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಫೋಟೋಗಳನ್ನು ಮೊಹಮ್ಮದ್ ನಲಪಾಡ್ ತಮ್ಮ ಫೇಸ್‌ಬುಕ್ ಖಾತೆ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಟೋಗಳೆಲ್ಲ ಇದೀಗ ವೈರಲ್ ಆಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net