ಸ್ವಾತಂತ್ರ್ಯೋತ್ಸವ ಸರಳ ಆಚರಣೆಗೆ ತೀರ್ಮಾನ

26skpp4
Published on

ಸಕಲೇಶಪುರ: ಮಳೆ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ದಿನವನ್ನು ಪಟ್ಟಣದ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು.


ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಶಾಸಕ ಸಿಮೆಂಟ್ ಮಂಜು ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸ್ವಾತಂತ್ರೃ ದಿನಾಚರಣೆ ಪೂರ್ವಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಯಿತು.

ಮಳೆ ಹಿನ್ನೆಲೆಯಲ್ಲಿ ಶಾಮಿಯಾನ ಹಾಕಿ ಕಾರ್ಯಕ್ರಮ ನಡೆಸುವುದು, ಪೊಲೀಸ್ ಕವಾಯತು, ಶಾಲಾ ಮಕ್ಕಳಿಂದ ಪರೇಡ್ ನಡೆಸುವುದು, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವುದು ಹಾಗೂ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ 10 ಸಾಧಕರನ್ನು ಸನ್ಮಾನಿಸಲು ಸಮ್ಮಿತಿಸಲಾಯಿತು. ತಹಸೀಲ್ದಾರ್ ಮೇಘನಾ, ಇಒ ರಾಮಚಂದ್ರ, ಕಸಾಪ ಅಧ್ಯಕ್ಷೆ ಶಾರದಾ ಗುರುಮೂರ್ತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net