

ಮೈಸೂರು: ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಜು. 26ರಂದು ಸ್ವಾತಿ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 7.30ಕ್ಕೆ ಸಂಕಲ್ಪ, 9ಕ್ಕೆ ಅಭಿಷೇಕ, 10ಕ್ಕೆ ಅಲಂಕಾರ, 11ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 12ಕ್ಕೆ ಶಾತ್ತುಮೊರೈ, 12.30ಕ್ಕೆ ತೀರ್ಥ ಪ್ರಸಾದ ವಿನಿಯೋಗ ಇರಲಿದೆ. ಸಂಜೆ 7ಕ್ಕೆ ಪ್ರಾಕಾರೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ವಿದ್ವಾನ್ ಕೆ.ಆರ್.ಯೋಗನರಸಿಂಹನ್ (ಮುರುಳಿ)ತಿಳಿಸಿದ್ದಾರೆ. ಮಾಹಿತಿ ಮೊಬೈಲ್ 9342188323 ಸಂಪರ್ಕಿಸಬಹುದು.