ಸ್ವಾಮಿ ವಿವೇಕಾನಂದ ಯುವಕರಿಗೆ ಪ್ರೇರಣೆಯ ಚಿಲುಮೆ

Swami Vivekananda, Jayanti, Indi, Tamba, Chilume,
ಇಂಡಿ ಪಟ್ಟಣದ ಎಂ.ಎ್.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮಕ್ಕೆ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಚಾಲನೆ ನೀಡಿದರು. ಶಿವಾನಂದ ವಾಲೀಕಾರ, ಡಾ.ಎಸ್.ಬಿ.ಜಾಧವ, ಬಿ.ಎಚ್.ಬಗಲಿ ಇತರರಿದ್ದರು.
Published on

ಇಂಡಿ: ಸ್ವಾಮಿ ವಿವೇಕಾನಂದರ ಜೀವನ ಮತ್ತು ವ್ಯಕ್ತಿತ್ವ ಕೋಟಿ ಕೋಟಿ ಯುವಕರಿಗೆ ಪ್ರೇರಣೆಯ ಚಿಲುಮೆಯಾಗಿದೆ. ಅವರು ಭಾರತ ದೇಶದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಪಸರಿಸಿದ ಧೀಮಂತ ನಾಯಕರಾಗಿದ್ದಾರೆ ಎಂದು ತಾಂಬಾ ಗ್ರಾಮದ ಎಸ್.ಆರ್.ಮಾಳಗೆ ಕಲಾ ವಾಣಿಜ್ಯ ಮಹಾವಿದ್ಯಾಲಯದ ಉಪನ್ಯಾಸಕ ಶಿವಾನಂದ ವಾಲೀಕಾರ ಹೇಳಿದರು.

ಪಟ್ಟಣದ ಎಸ್.ಎಸ್.ವಿ.ವಿ. ಸಂಘದ ಜಿ.ಆರ್.ಗಾಂಧಿ ಕಲಾ, ವೈ.ಎ.ಪಾಟೀಲ ವಾಣಿಜ್ಯ ಹಾಗೂ ಎಂ.ಎ್.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್., ಯುತ್ ರೆಡ್‌ಕ್ರಾಸ್ ಹಾಗೂ ಸ್ಕೌಟ್ಸ್ ಗೈಡ್ಸ್ ಘಟಕಗಳ ಅಡಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಎಸ್.ಬಿ.ಜಾಧವ, ಉಪನ್ಯಾಸಕ ಬಿ.ಎಚ್.ಬಗಲಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಡಾ.ಶ್ರೀಕಾಂತ ರಾಠೋಡ ನಿರೂಪಿಸಿದರು.

ಸಹಾಯಕ ಪ್ರಾಧ್ಯಾಪಕ ಡಾ.ವಿಶ್ವಾಸ ಕೊರವಾರ ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಡಾ.ಸುರೇಂದ್ರ ಕೆ. ನಿರ್ವಹಿಸಿದರು.
ಸಹಾಯಕ ಪ್ರಾಧ್ಯಾಪಕರಾದ ಡಾ.ಆನಂದ ನಡವಿನಮನಿ, ಶ್ರೀಶೈಲ ಸಣ್ಣಕ್ಕಿ, ಡಾ.ಸಿ.ಎಸ್.ಬಿರಾದಾರ, ಡಾ.ಜಯಪ್ರಸಾದ ಡಿ., ಎಂ.ಆರ್.ಕೋಣದೆ, ಆರ್.ಪಿ.ಇಂಗನಾಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net