ಸ್ವಾವಲಂಬಿ ಜೀವನಕ್ಕೆ ಸಹಕಾರಿ ಯೋಜನೆಗಳು

12KOTTUR 01
Published on

ಕೊಟ್ಟೂರು: ನಾಡಿನಾದ್ಯಂತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೂರಾರು ಜನಹಿತ ಕಾರ್ಯಗಳು ನಡೆದಿದೆ. ಈ ಕಾರ್ಯಗಳನ್ನು ಸಹಿಸದ ಕೆಲವರು ಮಾಡುವ ಕುತಂತ್ರ ಹಾಗೂ ಷಡ್ಯಂತರಗಳಿಗೆ ಕಿವಿಗೊಡಬಾರದು ಎಂದು ಶಾಸಕ ಕೆ.ನೇಮಿರಾಜ್ ನಾಯ್ಕ ಹೇಳಿದರು.

ಪಟ್ಟಣದ ಚಾನುಕೋಟಿ ಮಠದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಭಾನುವಾರ ಮಾತನಾಡಿದರು. ಧರ್ಮಸ್ಥಳ ಕೇವಲ ಯಾತ್ರಾ ಕ್ಷೇತ್ರವಾಗಿರದೆ ಸರ್ವರನ್ನೂ ಸಮನಾಗಿ ಕಾಣುವ ಧರ್ಮ ಕ್ಷೇತ್ರವಾಗಿದೆ. ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಲು ಶ್ರೀ ಕ್ಷೇತ್ರದ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಯೋಜನೆಗಳ ಉಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಸಾನ್ನಿಧ್ಯ ವಹಿಸಿ ಮಾತನಾಡಿದ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮಹಿಳಾ ವಿಚಾರಗೋಷ್ಠಿಗಳು ಮಹಿಳೆಯರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಿ ಕೌಟುಂಬಿಕ ಜೀವನದಲ್ಲಿ ಅನ್ಯೋನ್ಯ ಮತ್ತು ಸ್ವಾವಲಂಬಿ ಜೀವನಕ್ಕೆ ಸಹಕಾರಿಯಾಗಲಿವೆ ಎಂದರು. ಮಹಿಳೆಯರಿಗೆ ರಂಗೋಲಿ ಹಾಗೂ ಇತರ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಂ.ಜೆ ಹರ್ಷವರ್ಧನ್, ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಪಟ್ಟಣ ಪಂಚಾಯಿತಿ ಸದಸ್ಯೆ ಕೆ.ಎಸ್.ವೀಣಾ ವಿವೇಕಾನಂದ ಗೌಡ, ಜನಜಾಗೃತಿ ವೇದಿಕೆಯ ಜಿಲ್ಲಾ ಸದಸ್ಯ ಮಲ್ಲಿಕಾರ್ಜುನ್ ಮಠದ್, ನೇತ್ರಾವತಿ ಮಲ್ಲಿಕಾರ್ಜುನ್ ಎಂಉಜ್ಜಿನಿ ಇನ್ನಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net