

ಕಂಪ್ಲಿ: ಪಟ್ಟಣದ ಷಾ.ಮಿಯಾಚಂದ್ ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ತಾಲೂಕು ರಾಷ್ಟ್ರಿಯ ಹಬ್ಬಗಳ ಆಚರಣೆ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ತಹಸೀಲ್ದಾರ್ ಜೂಗಲ ಮಂಜುನಾಯಕ ಧ್ವಜಾರೋಹಣ ನೆರವೇರಿಸಿ, ಪಥಸಂಚಲನದ ಗೌರವ ಸ್ವೀಕರಿಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಕನಸಿನ ಭಾರತವನ್ನು ನಿರ್ಮಿಸಲು, ವಿಕಸಿತ, ಸ್ವಾವಲಂಬಿ ಭಾರತ ರೂಪಿಸಲು ನಾವೆಲ್ಲರೂ ಪಣ ತೊಡಬೇಕಿದೆ ಎಂದರು.
ಪುರಸಭಾಧ್ಯಕ್ಷ ಭಟ್ಟ ಪ್ರಸಾದ್ ಮಾತನಾಡಿ, ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ ಎಂದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಎಪಿಎಂಸಿ ಅಧ್ಯಕ್ಷ ಎನ್.ಹಬೀಬ್ ರೆಹಮಾನ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ಸದಸ್ಯರು, ದಿಶಾ ರಾಜ್ಯ ಸಮಿತಿ ಸದಸ್ಯ ಎ.ಸಿ.ದಾನಪ್ಪ, ತಾಪಂ ಇಒ ಆರ್.ಕೆ.ಶ್ರೀಕುಮಾರ್, ಎಡಿ ಕೆ.ಎಸ್.ಮಲ್ಲನಗೌಡ, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಆರಕ್ಷಕ ನಿರೀಕ್ಷಕ ಕೆ.ಬಿ.ವಾಸುಕುಮಾರ್, ಡಿಟಿ ಬಿ.ರವೀಂದ್ರಕುಮಾರ್, ಪ್ರಾಚಾರ್ಯೆ ಸುಜಾತಾ, ಪ್ರಮುಖ ಕೆ.ಎಂ.ಹೇಮಯ್ಯಸ್ವಾಮಿ ಇತರರಿದ್ದರು.