ಸ್ವಾಸ್ಥ ಸಮಾಜಕ್ಕೆಯುವಕರ ಸಹಕಾರ ಅವಶ್ಯ

2002 MDR. P-17-2
Published on

ಮದ್ದೂರು: ಯುವಕರು ದುಶ್ಚಟಗಳಿಂದ ದೂರವಿದ್ದು, ಸ್ವಾಸ್ಥ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಯೋಗೇಶ್ ಕನ್ಯಾಡಿ ತಿಳಿಸಿದರು.


ತಾಲೂಕಿನ ಬೆಸಗರಹಳ್ಳಿ ವಲಯದ ಬಿದರಕೋಟೆ ಶ್ರೀ ವಿದ್ಯಾಗಣಪತಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯಿಂದ ಇತ್ತೀಚೆಗೆ ಆಯೋಜಿಸಿದ್ದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳ ದಾಸರಾಗಿ ಸಮಾಜಘಾತುಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ವ್ಯಾಸಂಗದ ಜತೆಗೆ ಗುರು, ಹಿರಿಯರನ್ನು ಗೌರವದಿಂದ ಕಾಣುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸಂಪನ್ಮೂಲ ವ್ಯಕ್ತಿ ಮುದ್ದೇಗೌಡ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ ಕುರಿತು ಮಕ್ಕಳಿಗೆ ವಿಶೇಷ ಉಪನ್ಯಾಸ ನೀಡಿದರು. ಗ್ರಾಪಂ ಸದಸ್ಯ ಮಂಜು, ಒಕ್ಕೂಟದ ಅಧ್ಯಕ್ಷೆ ಪುಷ್ಪಲತಾ, ಶಿಕ್ಷಕಿ ಅರ್ಚನಾ, ಕಾರ್ಯದರ್ಶಿ ಜಯಸ್ವಾಮಿ, ಸೇವಾ ಪ್ರತಿನಿಧಿಗಳು, ಮೇಲ್ವಿಚಾರಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net