

ಆಲ್ದೂರು: ಸವಿತಾ ಸಮಾಜದವರು ಸಂಘಟಿತರಾಗಿ ಹಕ್ಕುಗಳಿಗಾಗಿ ಹೋರಾಡಬೇಕಿದೆ. ಪಟ್ಟಣದಲ್ಲಿ ಸವಿತಾ ಸಮಾಜದವರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಎಂದು ಶಿಕ್ಷಕ ಜೋಸ್ೆ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಸವಿತಾ ಸಮಾಜದಿಂದ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತ್ಯುತ್ಸವದಲ್ಲಿ ಮಾತನಾಡಿ, ಸವಿತಾ ಮಹರ್ಷಿಗಳ ಆಚರಣೆಯಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಇವರಿಂದಲೇ ಶುಭ ಸಮಾರಂಭಗಳಿಗೆ ಚಾಲನೆ ಸಿಗಬೇಕಿದೆ ಎಂದರು.
ಸವಿತಾ ಸಮಾಜದ ಹೋಬಳಿ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಸಮಾಜದವರ ಸಹಕಾರದಿಂದ ಉತ್ತಮ ಕೆಲಸಗಳನ್ನು ಮಾಡಲಾಗುತ್ತಿದೆ. ಪಟ್ಟಣದಲ್ಲಿ ಕ್ರಿಕೆಟ್ ಆಯೋಜನೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದರು.
ಸವಿತಾ ಸಮಾಜದ ಉಪಾಧ್ಯಕ್ಷ ಮಹೇಶ್, ಕಾರ್ಯದರ್ಶಿ ಶಿವಪ್ಪ, ಖಜಾಂಚಿ ಮದನ್, ಪದಾಧಿಕಾರಿಗಳು ಇದ್ದರು.