

ಹಗರಿಬೊಮ್ಮನಹಳ್ಳಿ: ಪಟ್ಟಣದ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜ.20ರಂದು ದಿಶಾ ಸಭೆ ಆಯೋಜನೆ ಹಿನ್ನಲೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಮ್ ಅಲಿ ಷಾ ಭಾನುವಾರ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.
ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದ್ದು, ಬಳ್ಳಾರಿ ಸಂಸದ ಈ.ತುಕಾರಾಮ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ.ನೇಮಿರಾಜ್ ನಾಯ್ಕ ಸಹ ಭಾಗವಹಿಸಲಿದ್ದಾರೆ.
ಇದಕ್ಕೂ ಮುನ್ನ ಪಟ್ಟಣದ ಹಗರಿ ಆಂಜನೇಯ ದೇಗುಲದ ಆವರಣದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲು ಸ್ವೀಕರಿಸಲಾಗುವುದು ಎಂದು ತಾಪಂ ಇಒ ಡಾ.ಜಿ.ಪರಮೇಶ್ವರಪ್ಪ ತಿಳಿಸಿದರು. ನರೇಗಾ ಸಹಾಯಕ ನಿರ್ದೇಶಕ ರಮೇಶ್ ಮಹಾಲಿಂಗಪುರ ಇದ್ದರು.