ಹಗಲು ವೇಷಗಾರರಿಂದ ಕಲೆ ಪಸರಿಸುವ ಕಾರ್ಯ

Oplus_131072
Oplus_131072
Published on

ಮಸ್ಕಿ: ಆಧುನಿಕತೆ ಭರಾಟೆಯಲ್ಲಿ ಜಾನಪದ ಕಲೆ ನಶಿಸಿಹೋಗುವ ಅಪಾಯದಲ್ಲಿದೆ. ಜಾನಪದ ಕಲೆ ಉಳಿಯಬೇಕಾದರೆ ಜಾನಪದ ಕಲಾವಿದರಿಗೆ ಸರ್ಕರ ಹೆಚ್ಚಿನ ಅನುದಾನ ನೀಡಬೇಕೆಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಪಟ್ಟಣದ ಗಚ್ಚಿನ ಹಿರೇಮಠದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬಹುರೂಪಿ ಚೌಡಯ್ಯ ಹಗಲುವೇಷ ಕಲಾವಿದರ ಟ್ರಸ್ಟ್‌ನಿಂದ ಆಯೋಜಿಸಿದ್ದ ಜಾನಪದ ಕಲಾ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಭಾನುವಾರ ಮಾತನಾಡಿದರು.

ಹಗಲು ವೇಷಗಾರರು ಜಾನಪದ ಕಲೆಯನ್ನು ಜೀವಂತವಾಗಿಟ್ಟಿದ್ದಾರೆ. ಗ್ರಾಮಗಳಲ್ಲಿ ನಿರಂತರವಾಗಿ ಜಾನಪದ ಕಲೆಯನ್ನು ಪಸರಿಸುವ ಮಹತ್ವದ ಕಾರ್ಯ ಮಾಡುತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net