ಹಡಪದ ಅಪ್ಪಣ್ಣ ಜಯಂತಿ 21ಕ್ಕೆ

Appanna
Published on

ಕಲಬುರಗಿ: ಡಾ.ಎಸ್.ಎಂ. ಪಂಡಿತ ರಂಗಮAದಿರದಲ್ಲಿ ಜು.೨೧ರಂದು ಹಡಪದ ಅಪ್ಪಣ್ಣ ಜಯಂತಿ ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಿದ ಅವರು, ರಂಗಮAದಿರ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಿ ಯಶಸ್ವಿಗೊಳಿಸಬೇಕು. ಸರ್ಕಾರಿ, ಅರೆಸರ್ಕಾರಿ ಕಚೇರಿ, ಅನುದಾನಿತ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಅಂದು ಬೆಳಗ್ಗೆ ೯ಕ್ಕೆ ಜಯಂತಿ ಆಚರಿಸಬೇಕು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಮಾತನಾಡಿ, ನಾಡಗೀತೆ, ಸಂಗೀತ ಕಾರ್ಯಕ್ರಮ ಆಯೋಜಿಸುವುದಾಗಿ ತಿಳಿಸಿದರು. ಶಿಷ್ಟಾಚಾರ ತಹಸೀಲ್ದಾರ್ ಪಂಪಯ್ಯ, ಸಮಾಜದ ಜಿಲ್ಲಾಧ್ಯಕ್ಷ ಈರಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net