ಹದಗೆಟ್ಟಿದೆ ಕಾನೂನು ಸುವ್ಯವಸ್ಥೆ

sankalp shettar
Published on

ಹುಬ್ಬಳ್ಳಿ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಎಂಬುವವರನ್ನು ಸಾರ್ವಜನಿಕ ಸ್ಥಳದಲ್ಲಿ ಕೊಲೆ ಮಾಡಿರುವುದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವುದಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಬಿಜೆಪಿ ಯುವ ಮುಖಂಡ ಸಂಕಲ್ಪ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲೆ, ಸುಲಿಗೆ, ಅತ್ಯಾಚಾರಗಳಂತಹ ಸಮಾಜ ಘಾತುಕ ಕೃತ್ಯಗಳು ನಿರಂತರವಾಗಿ ನಡೆಯುತ್ತಿದ್ದು, ಇದರಿಂದಾಗಿ ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಸಮಾಜದ ನೆಮ್ಮದಿಗೆ ಬೆಂಕಿ ಇಡುತ್ತಿರುವ ಇಂತಹ ಘಟನೆಗಳಿಗೆ ಅಂತ್ಯ ಇಲ್ಲದಂತಾಗಿರುವುದು ವಿಷಾದನೀಯ. ಕಣ್ಣು ಮುಚ್ಚಿ ಕುಳಿತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು. ರಾಜ್ಯದ ಜನತೆಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net