ಹದಿಹರೆಯದ ಸಮಸ್ಯೆ ಅರಿತುಕೊಳ್ಳಿ

bhr jci
ಬಾಳೆಹೊನ್ನೂರು ಸರ್ಕಾರಿ ಸುವರ್ಣ ಮಾದರಿ ಶಾಲೆಯಲ್ಲಿ ಆಯೋಜಿಸಿದ್ದ ಹದಿಹರೆಯದ ಮಾಹಿತಿ ಶಿಬಿರವನ್ನು ಆಯುರ್ವೇದ ವೈದ್ಯೆ ಅನುಷ್ಕಾ ಉದ್ಘಾಟಿಸಿದರು. ಇಬ್ರಾಹಿಂ ಶಾಫಿ, ಸೋಮಶೇಖರ್, ಅಶೋಕ್, ಶಶಿಧರ್ ಇತರರಿದ್ದರು.
Published on

ಬಾಳೆಹೊನ್ನೂರು: ಶಾಲಾ ದಿನಗಳಲ್ಲಿ ಹೆಣ್ಣು ಮಕ್ಕಳು ಹದಿಹರೆಯದ ಸಮಸ್ಯೆಗಳನ್ನು ಅರಿತುಕೊಂಡಿರಬೇಕು ಎಂದು ಆಯುರ್ವೇದ ವೈದ್ಯೆ ಅನುಷ್ಕಾ ಸುಧಾಕರ್ ಹೇಳಿದರು.

ಜೆಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆಯಿಂದ ಸರ್ಕಾರಿ ಸುವರ್ಣ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಹದಿಹರೆಯದ ಸಮಸ್ಯೆಗಳ ಮಾಹಿತಿ ಶಿಬಿರದಲ್ಲಿ ಮಾತನಾಡಿ, ಹೆಣ್ಣು ಮಕ್ಕಳು ವಯಸ್ಸಿಗೆ ಬಂದಂತೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಹೆಣ್ಣು ಮಕ್ಕಳು ತಾಯಂದಿರು, ವೈದ್ಯರು ಹಾಗೂ ಶಿಕ್ಷಕಿಯರ ಬಳಿ ಈ ಬಗ್ಗೆ ಕೇಳಿ ತಿಳಿದುಕೊಂಡಿರಬೇಕು. ದೈನಂದಿನ ಜೀವನದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಹದಿಹರೆಯದ ವಯಸ್ಸಿನಲ್ಲಿ ಯಾವುದೇ ರೀತಿ ದಾರಿ ತಪ್ಪದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಕಿರಿಯ ವಯಸ್ಸಿನಲ್ಲಿ ಆರೋಗ್ಯ ಕಾಪಾಡಿಕೊಂಡಲ್ಲಿ ಭವಿಷ್ಯದಲ್ಲೂ ಆರೋಗ್ಯ ಉತ್ತಮವಾಗಿರುತ್ತದೆ ಎಂದರು.

ಜೆಸಿಐ ಅಧ್ಯಕ್ಷ ಇಬ್ರಾಹಿಂ ಶಾಫಿ ಮಾತನಾಡಿ, ಹೆಣ್ಣುಮಕ್ಕಳು ಕಿರಿಯ ವಯಸ್ಸಿನಲ್ಲಿ ಎದುರಾಗುವ ಸಮಸ್ಯೆಗಳ ಬಗ್ಗೆ ಯಾವುದೇ ಮುಚ್ಚುಮರೆ ಇಲ್ಲದೆ ವೈದ್ಯರು, ತಾಯಂದಿರ ಬಳಿ ಹೇಳಿಕೊಂಡು ಪರಿಹರಿಸಿಕೊಳ್ಳಬೇಕು. ವೈಯಕ್ತಿಕ ಸಮಸ್ಯೆಗಳ ಬಗ್ಗೆ ಅಂಜಿಕೆ ಹೊಂದಿದರೆ ಭವಿಷ್ಯದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಖ್ಯಶಿಕ್ಷಕ ಸೋಮಶೇಖರ್, ಜೆಸಿಐ ಕಾರ್ಯದರ್ಶಿ ವಿ.ಅಶೋಕ್, ನಿಕಟಪೂರ್ವ ಅಧ್ಯಕ್ಷ ಎನ್.ಶಶಿಧರ್, ಪೂರ್ವಾಧ್ಯಕ್ಷ ಸುಧಾಕರ್, ಎಸ್.ಎಲ್.ಚೇತನ್, ಸದಸ್ಯರಾದ ಶಾಹಿದ್, ರಂಜಿತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net