

ಶನಿವಾರಸಂತೆ: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ 2ನೇ ಅವಧಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಎಂ.ಮಹಮ್ಮದ್ ಹನೀಫ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ದಾಕ್ಷಾಯಿಣಿ ಅವಿರೋಧವಾಗಿ ಆಯ್ಕೆಯಾದರು.
ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸದಸ್ಯ ಮಹಮ್ಮದ್ ಹನೀಫ್ ಹಾಗೂ ಪರಿಶಿಷ್ಟ ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಸದಸ್ಯೆ ದಾಕ್ಷಾಯಿಣಿ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆ ಚುನಾವಣೆ ಅಧಿಕಾರಿ ಇಬ್ಬರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಅಕ್ಷರ ದಾಸೋಹ ಸಹ ನಿರ್ದೇಶಕ ಕಾಳನಾಯಕ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪಿಡಿಒ ಗಿರೀಶ್, ಕಾರ್ಯದರ್ಶಿ ಅಶ್ವತ್ಥ, ಕಾಂಗ್ರೆಸ್ ಪ್ರಮುಖರು ಪಾಲ್ಗೊಂಡಿದ್ದರು.