ಹನೂರಿಗೆ ಮುಖ್ಯಮಂತ್ರಿ ಭೇಟಿ ಹಿನ್ನೆಲೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಿದ್ದತೆ ಪರಿಶೀಲನೆ

1670071062758
Published on

ಚಾಮರಾಜನಗರ: ಜಿಲ್ಲೆಯ ಹನೂರು ಪಟ್ಟಣಕ್ಕೆ ಡಿಸೆಂಬರ್ 12 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ರವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಇಂದುಸಂಜೆ ಹನೂರಿನ ಮಹದೇಶ್ವರ ಕ್ರೀಡಾಂಗಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಭೇಟಿ ನೀಡಿ ಪರಿಶೀಲಿಸಿದರು.

ಡಿಸೆಂಬರ್ 12 ರಂದು ಮದ್ಯಾಹ್ನ ಹನೂರಲ್ಲಿ ಮುಖ್ಯ ಮಂತ್ರಿಯವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಛಾಟನೆ,ಶಂಕುಸ್ಥಾಪನೆ ನೆರವೇರಿಸಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದು ಈ ಕಾರ್ಯಕ್ರಮಕ್ಕಾಗಿ ಹನೂರಿನ ಮಹದೇಶ್ವರ ಕ್ರೀಡಾಂಗಣ ನಿಗದಿ ಮಾಡಲಾಗಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣರವರು ಮಹದೇಶ್ವರ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಸಚಿವರು, ಕ್ರೀಡಾಂಗಣದಲ್ಲಿ ವೇದಿಕೆ,ಇನ್ನಿತರ ಸಿದ್ದತೆ ಕೆಲಸವನ್ನು ನಾಳೆಯೇ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕ್ರೀಡಾಂಗಣದಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆಯನ್ನು ತಕ್ಷಣವೇ ಮಾಡಬೇಕು.ಎಲ್ಲ ಕೆಲಸವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸಚಿವರು ನಿರ್ಧೆಶನ ನೀಡಿದರು.

ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಜಿಲ್ಲಾ.ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್,ಉಪ ವಿಭಾಗಾಧಿಕಾರಿ ಗೀತಾ ಹುಡೇದ,ತಹಸೀಲ್ದಾರ್ ಆನಂದಯ್ಯ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net