ಹನೂರು ಕ್ಷೇತ್ರದ ಅಭಿವೃದ್ಧಿಗೆ ಕ್ರಮ

14kglphoto-2
ಕೊಳ್ಳೇಗಾಲ ಪಟ್ಟಣದ ಪ್ರವಾಸಿ ಮಂದಿರಕ್ಕೆ ಹನೂರು ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿದ್ದರು.
Published on

ಕೊಳ್ಳೇಗಾಲ: ಹನೂರು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕ್ರಮ ವಹಿಸುವ ಸಂಬಂಧ ತಾಲೂಕು ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳ ಸಭೆ ಕರೆಯಲು ಉಪವಿಭಾಗಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದು ಹನೂರು ಶಾಸಕ ಎಂ.ಆರ್.ಮಂಜುನಾಥ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನೂರು ಕ್ಷೇತ್ರದಲ್ಲಿ ಸಾಕಷ್ಟು ಕೆಲಸವಾಗಿಲ್ಲ. ಜನಸಾಮಾನ್ಯರ ಕೆಲಸಗಳು ಸಕಾಲಕ್ಕೆ ಕಚೇರಿಗಳಲ್ಲಿ ನಡೆಯುತ್ತಿಲ್ಲ. ಈ ಬಗ್ಗೆ ಹಿಂದಿನಿಂದಲೂ ದೂರಿದೆ. ಹೀಗಾಗಿ ಅಧಿಕಾರಿಗಳ ಸಭೆ ಕರೆಯಲು ಸೂಚನೆ ನೀಡಲಾಗಿದ್ದು, ಎಸಿ ಗೀತಾ ಹುಡೇದ ಅವರು ಶೀಘ್ರ ಸಭೆ ಕರೆಯುವುದಾಗಿ ತಿಳಿಸಿದ್ದಾರೆ ಎಂದರು.

ಜಿಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಮುಖಂಡ ಮಂಜೇಶ್, ಮಧುವನಹಳ್ಳಿ ಗ್ರಾಪಂ ಸದಸ್ಯ ಮಹದೇವಸ್ವಾಮಿ, ಮುಖಂಡ ಕಾಮಗೆರೆ ಶರತ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net