ಹನೂರು ಕ್ಷೇತ್ರದಿಂದ ಹೆಚ್ಚಿನ ಜನರು ಭಾಗವಹಿಸಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಮನವಿ

24 HANUR 1
????????????????????????????????????
Published on



ಚಾಮರಾಜನಗರ : ಜೋಡೋ ಪಾದಯಾತ್ರೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಿಂದ 10 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಮನವಿ ಮಾಡಿದರು.

ಹನೂರು ಪಟ್ಟಣ ಸಮೀಪದ ಆರ್.ಎಸ್.ದೊಡ್ಡಿ ಬಳಿಯ ಶ್ರೀ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಜೋಡೋ ಪಾದಯಾತ್ರೆ ಸಂಬಂಧ ಶನಿವಾರ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.


ಬಿಜೆಪಿ ಸರ್ಕಾರ ಅಭಿವೃದ್ಧಿಯ ಬಗ್ಗೆ ಕಿಂಚಿತ್ತೂ ಗಮನಹರಿಸುತ್ತಿಲ್ಲ. ಬದಲಾಗಿ ಜಾತಿ, ಧರ್ಮದ ನಡುವೆ ವಿಷ ಬೀಜವನ್ನು ಬಿತ್ತುವುದರ ಮೂಲಕ ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರೈತರ ಆದಾಯವನ್ನು ದುಪ್ಪಟುಗೊಳಿಸುವ ಯೋಜನೆಯನ್ನು ರೂಪಿಸುತ್ತೇವೆ. ಪ್ರತಿ ವರ್ಷ 2 ಕೋಟಿ ಉದ್ಯೋಗವನ್ನು ಸೃಷ್ಠಿ ಮಾಡುತ್ತೇವೆ ಎಂದು ಪ್ರಧಾನಿ ಮೋದಿ ಜನರಿಗೆ ಆಶ್ವಾಸನೆ ನೀಡಿದ್ದರು. ಆದರೆ ಉದ್ಯೋಗ ದೊರಕಿಸಿ ಕೊಡುವಲ್ಲಿ ವಿಫಲರಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನ ಸಾಮಾನ್ಯರನ್ನು ಕಷ್ಟಕ್ಕೆ ದೂಡುತ್ತಿದ್ದಾರೆ ಎಂದು ಕಿಡಿಕಾರಿದರು.


ಇದೇ ವೇಳೆ ಶಾಸಕ ಆರ್.ನರೇಂದ್ರ ಮಾತನಾಡಿದರು. ಸಭೆಯಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಮಾಜಿ ಸದಸ್ಯ ಕೊಪ್ಪಾಳಿ ಮಹದೇವನಾಯ್ಕ, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಸದಸ್ಯ ಜವಾದ್ ಆಹಮದ್, ಪಪಂ ಉಪಾಧ್ಯಕ್ಷ ಗಿರೀಶ್, ಗ್ರಾಪಂ ಅಧ್ಯಕ್ಷೆ ಸುಧಾ, ಮುಖಂಡರಾದ ಚಿಕ್ಕತಮ್ಮಯ್ಯ, ವೆಂಕಟರಮಣನಾಯ್ಡು, ಪಾಳ್ಯ ಕೃಷ್ಣ, ಮಂಗಲ ಪುಟ್ಟರಾಜು, ಗುಂಡಾಪುರದ ಮಾದೇಶ್, ಮಣಿ, ಮತೀನ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net