ಹನೂರು ಪಿಎಂಶ್ರೀ ಶಾಲೆ ಆರಂಭೋತ್ಸವ

30 HANUR 1
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಹನೂರು: ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶುಕ್ರವಾರ ಪಟ್ಟಣದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಮಿಸಿದ ಮಕ್ಕಳಿಗೆ ಶಾಸಕ ಎಂ.ಆರ್ ಮಂಜುನಾಥ್ ಅವರು ಗುಲಾಬಿ ಹೂ, ಸಿಹಿ ನೀಡಿ ಸ್ವಾಗತಿಸಿ ಬರಮಾಡಿಕೊಂಡರು.

ಬಳಿಕ ಆಯೋಜಿಸಿದ್ಧ ಸಭೆಯಲ್ಲಿ ಶಾಸಕರು ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸಿ ಮಾತನಾಡಿ, ಶಿಕ್ಷಣ ದೇಶದ ಭವಿಷ್ಯದ ಅಡಿಗಲ್ಲು. ಹಾಗಾಗಿ ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಣ ಮಹತ್ವದ ಪಾತ್ರವನ್ನು ವಹಿಸುತ್ತದೆ. ಈ ದೆಸೆಯಲ್ಲಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಶಾಲೆಯ ಅಭಿವೃದ್ಧಿಯ ಜತೆಗೆ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಬಿಸಿಯೂಟ, ಹಾಲು ಸೇರಿದಂತೆ ಇನ್ನು ಹಲವು ಸವಲತ್ತುಗಳನ್ನು ಒದಗಿಸುತ್ತಿದೆ. ಯಾವುದೇ ಮಗು ಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ಧೇಶದಿಂದ ಕಡ್ಡಾಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ. ಆದ್ದರಿಂದ ಪಾಲಕರು ಈ ಬಗ್ಗೆ ಮನದಟ್ಟು ಮಾಡಿಕೊಂಡು ಮಕ್ಕಳನ್ನು ಶಾಲೆಗೆ ಸೇರಿಸಬೇಕು ಎಂದು ಸಲಹೆ ನೀಡಿದರು.

ಇದಕ್ಕೂ ಮುನ್ನಾ ಶಾಸಕರು ಎಲ್‌ಕೆಜಿ ತರಗತಿ ಕೊಠಡಿಯನ್ನು ಉದ್ಘಾಟಿಸಿ ಪರಿಶೀಲಿಸಿದರು. ಈ ವೇಳೆ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಹೂಗ್ಯಂ ಗ್ರಾಮದಲ್ಲೂ ಎಲ್‌ಕೆಜಿ ತರಗತಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪಪಂ ಅಧ್ಯಕ್ಷೆ ಮಮ್ತಾಜ್ ಬಾನು, ಸದಸ್ಯ ಸಂಪತ್‌ಕುಮಾರ್, ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ತಹಸೀಲ್ದಾರ್ ವೈ.ಕೆ ಗುರುಪ್ರಸಾದ್, ಬಿಇಒ ಗುರುಲಿಂಗಯ್ಯ, ಸಿಡಿಪಿಒ ಅಂಬಿಕಾ, ಸಂಸ್ಕೃತ ವಿಷಯ ಪರಿವೀಕ್ಷಕ ಮಲ್ಲಣ್ಣ, ಎಸ್‌ಡಿಎಂಸಿ ಅಧ್ಯಕ್ಷೆ ರೇಖಾ, ಶಿಕ್ಷಕರಾದ ಶುಭಮಂಗಳ, ಕಲಾವತಿ, ಅನಿತಾ, ಧರ್ಮಲಿಂಗಂ ಇತರರು ಇದ್ದರು.

ಇಂದಿರಾ ಕ್ಯಾಂಟೀನ್ ಪರಿಶೀಲನೆ

ಬಳಿಕ ಶಾಲಾ ಆವರಣದಲ್ಲಿನ ಇಂದಿರಾ ಕ್ಯಾಂಟೀನ್‌ಗೆ ತೆರಳಿದ ಶಾಸಕರು ಪರಿಶೀಲನೆ ನಡೆಸಿದರು. ಈ ವೇಳೆ ಪೈಪ್‌ಲೈನ್‌ನಿಂದ ನೀರು ಸೋರಿಕೆಯಾಗಿರುವುದನ್ನು ಗಮನಿಸಿದ ಶಾಸಕರು , ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಒಳಾಂಗಣ ಹಾಗೂ ಹೊರಾಂಗಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಆಗಮಿಸುವ ಸಾರ್ವಜನಿಕರು ರುಚಿ, ಶುಚಿಯಾದ ತಿಂಡಿ, ಊಟವನ್ನು ನೀಡಬೇಕು. ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ವ್ಯತ್ಯಾಸವಾಗಬಾರದು. ನಿರ್ವಹಣೆ ಸಮರ್ಪಕವಾಗಿರಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು. ಈ ವೇಳೆ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಪಿಎಸಿಸಿ ನಿರ್ದೇಶಕ ಲಿಂಗೇಗೌಡ, ಮುಖಂಡರಾದ ಅಮಿನ್, ಚಿನ್ನವೆಂಕಟ, ಗೋಪಾಲ್‌ನಾಯ್ಕ, ಮಹದೇವ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net