ಹರಕೆ ತೀರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್

4
Published on

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಶೇಷ ಪೂಜೆ ಸಲ್ಲಿಸುವುದಾಗಿ ಹರಕೆ ಹೊತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಾಮುಂಡೇಶ್ವರಿಗೆ ಮಂಗಳವಾರ ಹರಿಕೆ ತೀರಿಸಿದರು.
ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಒಂದೇ ಕಾರಿನಲ್ಲಿ ತೆರಳಿ ಸರ್ಕಾರ ಬುಧವಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೋಜನೆಯ ‘ಗೃಹಲಕ್ಷ್ಮಿ’ ಪತ್ರವನ್ನು ದೇವರ ಮುಂದಿಟ್ಟು ಪೂಜೆ ಸಲ್ಲಿಸಿದರು.
ಕೆಂಪು ಹಾಗೂ ಹಸಿರು ಬಣ್ಣದ ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಫಲ ತಾಂಬೂಲ ಸಮರ್ಪಿಸಿದರು. ಡಿ.ಕೆ.ಶಿವಕುಮಾರ್ ಅವರು ಗೃಹಲಕ್ಷ್ಮೀ ಯೋಜನೆಯ ಮೊದಲ ಹಣವನ್ನು ದೇವರಿಗೆ ಸಲ್ಲಿಸುತ್ತಿರುವುದಾಗಿ ಎರಡು ಸಾವಿರ ರೂ. ಅನ್ನು ಸಲ್ಲಿಸಿದರು. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಹಣ ನೀಡಿ ದೇವರ ಆರತಿ ತಟ್ಟೆಗೆ ಹಾಕಿಸಿದರು.
ಬಳಿಕ ದೇವಸ್ಥಾನದ ಮುಂದೆ ತೆಂಗಿನಕಾಯಿ ಒಡೆದರು. ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಕೆ.ಹರೀಶ್‌ಗೌಡ, ರವಿಶಂಕರ್ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net