ಹರಳಘಟ್ಟ ಗ್ರಾಪಂಗೆ ಕವಿತಾ ಅಧ್ಯಕ್ಷೆ

kdr gp
ಹರಳಘಟ್ಟ ಗ್ರಾಪಂ ಅಧ್ಯಕ್ಷೆ ಕವಿತಾ ರಮೇಶ್ ಅವರನ್ನು ಗ್ರಾಪಂ ಸದಸ್ಯರು ಅಭಿನಂದಿಸಿದರು. ಸುಧಾಕಾಂತ್, ಶ್ರೀನಿವಾಸ್, ಜಿಗಣೇಹಳ್ಳಿ ನೀಲಕಂಠಪ್ಪ ಮತ್ತಿತರರಿದ್ದರು.
Published on

ಕಡೂರು: ಹರಳಘಟ್ಟ ಗ್ರಾಪಂ ಅಧ್ಯಕ್ಷೆಯಾಗಿ ಕವಿತಾ ರಮೇಶ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಅಧಿಕಾರಿಯಾಗಿ ಪಿಡಬ್ಲುೃಡಿ ಎಇಇ ಬಸವರಾಜ್ ನಾಯ್ಕ ಕಾರ್ಯನಿರ್ವಹಿಸಿದರು. ಅಭಿನಂದನಾ ಸಭೆಯಲ್ಲಿ ನೂತನ ಅಧ್ಯಕ್ಷೆ ಕವಿತಾ ರಮೇಶ್ ಮಾತನಾಡಿ, ಸದಸ್ಯರ ಬೆಂಬಲದಿಂದ ಅವಿರೋಧವಾಗಿ ಆಯ್ಕೆಯಾಗಲು ಸಹಕಾರಿಯಾಗಿದ್ದು, ಎಲ್ಲರ ವಿಶ್ವಾಸ ಪಡೆದು ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು. ಬಿಜೆಪಿ ಮಂಡಲ ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ, ಗ್ರಾಪಂ ಉಪಾಧ್ಯಕ್ಷ ಶ್ರೀನಿವಾಸ್, ಸುಧಾಕಾಂತ್, ಲಕ್ಷ್ಮಮ್ಮ, ಜಗದೀಶ್ ನಾಯ್ಕ, ಪಿಡಿಒ ಜಯಂತಿ, ಕುಳುವ ಸಮಾಜದ ತಾಲೂಕು ಅಧ್ಯಕ್ಷ ಎ.ಜಿ.ಗಿರೀಶ್, ಅಡಕೆ ಚಂದ್ರು, ಸುಮಾಕಾಂತ್, ಕೆ.ವಿ.ವಾಸು, ಮಣಿ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net