ಹರವೆ ಚನ್ನಬಸವೇಶ್ವರ ಶಾಲಾ ವಾರ್ಷಿಕೋತ್ಸವ 24ಕ್ಕೆ

Published on

ಚಾಮರಾಜನಗರ: ತಾಲೂಕಿನ ಹರವೆ ಗ್ರಾಮದ ಶ್ರೀ ಚನ್ನಬಸವೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 21ನೇ ಶಾಲಾ ವಾರ್ಷಿಕೋತ್ಸವ ಸಮಾರಂಭ ಜ.24ರಂದು ಬೆಳಗ್ಗೆ 10.30ಕ್ಕೆ ಶಾಲಾವರಣದಲ್ಲಿ ಜರುಗಲಿದೆ. ಶ್ರೀಚನ್ನಬಸವೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷರು, ಹರವೆವಿರಕ್ತಮಠಾಧೀಶರಾದ ಶ್ರೀ ಸರ್ಪಭೂಷಣ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ಸಮಾರಂಭ ಉದ್ಘಾಟಿಸಲಿದ್ದು, ಮತ್ತೊಬ್ಬ ಸದಸ್ಯ ಡಾ.ತಿಮ್ಮಯ್ಯ ಅಧ್ಯಕ್ಷತೆ ವಹಿಸುವರು. ಮೈಸೂರಿನ ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ವಿಭಾಗದ ಸಹಾಯಕ ನಿರ್ದೇಶಕ ಬಿ.ನಿರಂಜನಮೂರ್ತಿ ಪ್ರಧಾನ ಭಾಷಣ ಮಾಡುವರು. ಬಿಇಒ ಹನುಮಶೆಟ್ಟಿ ಬಹುಮಾನ ವಿತರಿಸುವರು. ಕೆಎಂಎಫ್ ನಿರ್ದೇಶಕ ಎಂ.ನಂಜುಂಡಸ್ವಾಮಿ ಪ್ರತಿಭಾ ಪುರಸ್ಕಾರ ವಿತರಿಸುವರು. ಡಿಡಿಪಿಐ ರಾಮಚಂದ್ರರಾಜೇಅರಸ್, ಚಾಮುಲ್ ನಿರ್ದೇಶಕ ಎಚ್.ಎಸ್.ಬಸವರಾಜು, ಸದಾಶಿವಮೂರ್ತಿ, ವಕೀಲರಾದ ಮೈಸೂರಿನ ಎಚ್.ಪಿ.ಮಹದೇವಪ್ಪ, ಪ್ರಭುಸ್ವಾಮಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಶಿವಮೂರ್ತಿ, ಚನ್ನಬಸವೇಶ್ವರವಿದ್ಯಾಸಂಸ್ಥೆ ಕಾರ್ಯದರ್ಶಿ ಎಚ್.ಎಸ್.ಗಿರೀಶ್ ಇತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net