ಹರೆಯದ ಆಕರ್ಷಣೆಗೆ ಬಲಿಯಾಗಬೇಡಿ

2.npk-1
ಮೂರ್ನಾಡಿನ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಏರ್ಪಡಿಸಿದ್ದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಸುನೀತಾ ಮಾತನಾಡಿದರು.
Published on

ನಾಪೋಕ್ಲು: ಹದಿ ಹರೆಯದವರು ಯಾವುದೇ ಆಕರ್ಷಣೆಗಳಿಗೆ ಬಲಿಯಾಗದೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಏಡ್ಸ್ ನಿಯಂತ್ರಣ ಘಟಕದ ಸೂಪರಿಂಟೆಂಡೆಂಟ್ ಸುನೀತಾ ಹೇಳಿದರು.

ಸಮೀಪದ ಮೂರ್ನಾಡು ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಏರ್ಪಡಿಸಿದ್ದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಎಚ್‌ಐವಿ ಹರಡುವಿಕೆ ಹಾಗೂ ಏಡ್ಸ್ ಜಾಗೃತಿ ಎಲ್ಲರಲ್ಲಿ ಮೂಡಬೇಕು. ಏಡ್ಸ್ ನಿಯಂತ್ರಣ ಕ್ರಮಗಳ ಬಗ್ಗೆ ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳು ಇವೆ ಎಂದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ದಮಯಂತಿ, ಉಪನ್ಯಾಸಕರಾದ ಕಲಾವತಿ, ಉಷಾ, ರಶ್ಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net