ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ

Capture3
Published on

ಔರಾದ್: ಸ್ವಾತಂತ್ರೃ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸಕರ್ಾರ ಆಗಸ್ಟ್ 11ರಿಂದ 17ರವರೆಗೆ ಹಮ್ಮಿಕೊಂಡಿರುವ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್ ಘರ್ ತಿರಂಗಾ) ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಅಸಂಖ್ಯಾತ, ತ್ಯಾಗ, ಬಲಿದಾನ ಮತ್ತು ಹೋರಾಟಗಳ ಫಲವಾಗಿ ದಾಸ್ಯದ ಸಂಕೋಲೆಯಿಂದ ಭಾರತ ದೇಶವು ಸ್ವಾತಂತ್ರ್ಯಗೊಂಡು ಈಗ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮಕ್ಕೆ ಕಾರಣಿಕರ್ತ ಮಹನೀಯರ ಸ್ಮರಿಸುವ ಜತೆಗೆ ಎಲ್ಲರಲ್ಲಿಯೂ ದೇಶಪ್ರೇಮ ಜಾಗೃತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅತ್ಯಂತ ಮಹತ್ವದ ಅಭಿಯಾನ ರೂಪಿಸಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನರ್ಾಟಕದಲ್ಲಿ ಅಭಿಯಾನ ಯಶಸ್ವಿಗೊಳಿಸಲು ಮುಂದಾಗಿದ್ದಾರೆ. ರಾಜ್ಯಾದ್ಯಂತ 1 ಕೋಟಿ ರಾಷ್ಟ್ರ ಧ್ವಜ ಹಾರಿಸುವ ಉದ್ದೇಶ ಹೊಂದಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ನಿದರ್ೇಶನ ನೀಡಿದ್ದಾರೆ. ಅದರಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಪೊಲೀಸ್ ಇಲಾಖೆ ನೇತೃತ್ವದಲ್ಲಿ ಕಾರ್ಯಕ್ರಮ ಅನುಷ್ಠಾನಕ್ಕೆ ತರಲಾಗುತ್ತಿದೆ.

ಎಲ್ಲ ಸಕರ್ಾರಿ ಅಧಿಕಾರಿಗಳಿಗೆ ಈಗಾಗಲೇ ಸುತ್ತೋಲೆಗಳನ್ನು ನೀಡಲಾಗಿದ್ದು, ಶಾಲಾ- ಕಾಲೇಜು, ಅಂಗನವಾಡಿಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಕ್ರಮ ಕೈಗೊಳ್ಳುವಂತೆ ಸಕರ್ಾರದಿಂದ ಅಗತ್ಯ ನಿದರ್ೇಶನ ನೀಡಲಾಗಿದೆ. ಎನ್ಸಿಸಿ, ಎನ್ಎಸ್ಎಸ್, ಸ್ವಯಂ ಸೇವಕರು, ಮಾಜಿ ಸೈನಿಕರು, ಸಂಘ-ಸಂಸ್ಥೆಗಳು ಕಾರ್ಯಕ್ರಮದ ಯಶಸ್ವಿಗೆ ಸಕರ್ಾರದೊಂದಿಗೆ ಕೈಜೋಡಿಸಿವೆ.
ಜಿಪಂ, ತಾಪಂ, ಗ್ರಾಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲ ಕಚೇರಿಗಳಲ್ಲಿ ರಾಷ್ಟ್ರ ಧ್ವಜ ಹಾರಿಸಲು ಕ್ರಮ ವಹಿಸಬೇಕು. ಹಾಗೆಯೇ ಎಲ್ಲರೂ ಸ್ವಯಂ ಪ್ರೇರಿತರಾಗಿ ತಮ್ಮ ಮನೆಗಳ ಮೇಲೆ ಧ್ವಜ ಹಾರಿಸುವ ಮೂಲಕ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಸಚಿವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net