

ಬೀದರ್: ನಾಡಿನ ಪ್ರತಿಯೊಬ್ಬರೂ ತಮ್ಮ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಿ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೆ ಕೈಜೋಡಿಸಬೇಕು ಎಂದು ಜಿಲ್ಲೆಯವರೇ ಆದ ಚಿತ್ರನಟ ಹಣ್ಮು ಪಾಜಿ ಮನವಿ ಮಾಡಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ ನಡೆಯುತ್ತಿದೆ. ಎಲ್ಲರಲ್ಲಿ ದೇಶಭಕ್ತಿ ಹಾಗೂ ದೇಶಾಭಿಮಾನ ಬೆಳೆಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
ಆಗಸ್ಟ್ 15 ರಂದು ಜಿಲ್ಲೆಯ ಪ್ರತಿ ಮನೆ ಮೇಲೂ ರಾಷ್ಟ್ರಧ್ವಜ ಹಾರಿಸಬೇಕು. ಈ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು ಎಂದು ಕೋರಿದ್ದಾರೆ.