‘ಹರ್ ಘರ್ ತಿರಂಗಾ’ ಸರ್ವವ್ಯಾಪಿ ಆಗಲಿ: ಶಾಸಕ ಹರತಾಳು ಹಾಲಪ್ಪ

RPT WEB
Published on

ರಿಪ್ಪನ್‌ಪೇಟೆ: ಕೇಂದ್ರ ಸರ್ಕಾರ ಆಯೋಜಿಸಿರುವ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕಿರುವುದು ಭಾರತೀಯರಾದ ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.

ಅಭಿಯಾನದ ಅಂಗವಾಗಿ ಶುಕ್ರವಾರ ಸರ್ಕಾರಿ ಪದವಿ ಮತ್ತು ಪದವಿಪೂರ್ವ ಕಾಲೇಜಿನ ಮಕ್ಕಳಿಗೆ ರಾಷ್ಟ್ರಧ್ವಜ ವಿತರಿಸಿ ಮಾತನಾಡಿದ ಅವರು, ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆ ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿ ಆಗಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಅಭಿಲಾಷೆಯಂತೆ ದೇಶದ ಪ್ರತಿ ಮನೆಯ ಮೇಲೂ ರಾಷ್ಟ್ರಧ್ವಜ ಹಾರಾಡಬೇಕು. ರಾಷ್ಟ್ರಧ್ವಜ ಆರೋಹಣ ಮತ್ತು ಅವರೋಹಣ ಸಂದರ್ಭಗಳಲ್ಲಿ ಹೆಚ್ಚಿನ ಜಾಗ್ರತೆವಹಿಸಿ ಕಾರ್ಯಕ್ರಮಕ್ಕೆ ಕಿಂಚಿತ್ತೂ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net