ಹರ್ಷನ ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಶಿಕ್ಷೆ ವಿಧಿಸಿ

25Jaggu3
Published on

ಬೆಳಗಾವಿ: ಶಿವಮೊಗ್ಗದಲ್ಲಿ ನಡೆದ ಹಿಂದು ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಖಂಡಿಸಿ ಹಮಾರಾ ದೇಶ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟಿಸಿ, ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು. ದೇಶದಲ್ಲಿ ಈಚೆಗೆ ಹಿಂದು ಕಾರ್ಯಕರ್ತರ ಮೇಲೆ ಹಲ್ಲೆ, ಹತ್ಯೆ ಪ್ರಕರಣ ಹೆಚ್ಚುತ್ತಿವೆ. ಹರ್ಷನ ಹತ್ಯೆ ಮಾಡಿದ ಕೊಲೆಗಡುಕರಿಗೆ ಕಠಿಣ ಶಿಕ್ಷೆ ನೀಡಬೇಕು. ಹಿಂದು ಸಂಘಟನೆಗಳ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಶುಭಾಗಿ ಜೆಂಡೆ, ವೆಂಕಟೇಶ ಶಿಂಧೆ, ಮಲ್ಲಿಕಾರ್ಜುನ ಕೆ., ದೇವದತ್ತ ಮಾರ್ಜೇಕರ, ನಿತಿನ ಅಣ್ವೇಕರ, ಸಾಮ್ರಾಟ್ ಗೋಡ್ಸೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net