ಹಲವರು ಬಿಜೆಪಿಗೆ ಸೇರ್ಪಡೆ

bjp serpade
Published on

ಮಡಿಕೇರಿ: ಮಡಿಕೇರಿ ತಾಲೂಕು ಚೆಂಬು ಗ್ರಾಮದ ಊರುಬೈಲು ಮತ್ತು ಕುದುರೆಪಾಯ ಭಾಗದ ಸುಮಾರು ೨೦ ಕ್ಕೂ ಹೆಚ್ಚು ಕಾಂಗ್ರೆಸ್ ಹಾಗೂ ವಿವಿಧ ಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.


ಬಾಲಂಬಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ವಿಧಾನಸಭಾ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಹಾಗೂ ಬಿಜೆಪಿ ಜಿಲ್ಲಾದ್ಯಕ್ಷ ನಾಪಂಡ ರವಿ ಕಾಳಪ್ಪರವರು ಕಾರ್ಯಕರ್ತರನ್ನು ಬರಮಾಡಿಕೊಂಡರು.


ಬಿಜೆಪಿ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಜಿಲ್ಲಾ ವಕ್ತಾರ ಸುಬ್ರಹ್ಮಣ್ಯ ಉಪಾಧ್ಯಾಯ, ಪಯಸ್ವಿನಿ ಸೊಸೈಟಿ ಅಧ್ಯಕ್ಷ ಅನಂತ್ ಊರುಬೈಲು, ಪಂಚಾಯತ್ ಅಧ್ಯಕ್ಷ ತೀರ್ಥರಾಮ ಪೂಜಾರಿ ಗದ್ದೆ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net