ಹಲವೆಡೆ ಜಿ.ದೇವರಾಜೇಗೌಡ ಪ್ರಚಾರ

hole n pura 1 (2)
ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ದೇವರಾಜೇಗೌಡ ಅವರು ಹಾಸನ ತಾಲೂಕಿನ ದುದ್ದ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದರು ಜೊತೆಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ನಾರಾಯಣಗೌಡ ಶ್ರೀನಿವಾಸ್ ಮೋಹನ್ ನವೀನ ಇತರರು ಇದ್ದರು.
Published on

ಹೊಳೆನರಸೀಪುರ; ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ದೇವರಾಜೇಗೌಡ ಅವರು ಹಾಸನ ತಾಲೂಕಿನ ದುದ್ದ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿ, ಬಿಜೆಪಿ ಸಾಧನೆಗಳು ನನಗೆ ವರದಾನವಾಗಿದ್ದು, ಕ್ಷೇತ್ರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಮತದಾರರ ಬೆಂಬಲ ನನ್ನ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಕೇಂದ್ರ ಸರ್ಕಾರದ ಯೋಜನೆಗಳು, ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕರು ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಬದಲು ತಮ್ಮ ಕುಟುಂಬದ ಅಭಿವೃದ್ಧಿ ಮಾಡಿಕೊಂಡಿದ್ದಾರೆ. ಅಧಿಕಾರ ಅವರ ಮನೆಯಲ್ಲಿ ಕೇಂದ್ರೀಕೃತವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಅಡಿಯಲ್ಲಿ ಅಧಿಕಾರ ವಿಕೇಂದ್ರೀಕರಣವಾಗಬೇಕು. ಆದ್ದರಿಂದ ಈ ಬಾರಿ ಬದಲಾವಣೆಯ ಅಲೆ ಜೋರಾಗಿದೆ. ಮತದಾರರು ಅವರ ದುರಾಡಳಿತಕ್ಕೆ ತಿಲಾಂಜಲಿ ಇಡಲಿದ್ದಾರೆ ಎಂದು ಹೇಳಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಮಾಡಲಿ ನಾರಾಯಣಗೌಡ, ಎಂ.ಎನ್. ರಾಜು, ಶಾಂತಿಗ್ರಾಮ ಹೋಬಳಿಯ ಮುಖಂಡರಾದ ಶ್ರೀನಿವಾಸ್, ನವೀನ, ಕಾರ್ಯದರ್ಶಿ ಮೋಹನ, ದುದ್ದ ಹೋಬಳಿಯ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net