ಹಲ್ಲೆ ಖಂಡಿಸಿ ಬಸ್ ತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು

ಹಲ್ಲೆ ಖಂಡಿಸಿ ಬಸ್ ತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು
Published on

 ಹಾಸನ: ಕೆಎಸ್‌ಆರ್‌ಟಿಸಿ ಬಸ್‌ಗೆ ಹೆಚ್ಚಿನ ಪ್ರಯಾಣಿಕರು ಹತ್ತಿದ್ದರಿಂದ ಕೆಲವು ವಿದ್ಯಾರ್ಥಿಗಳನ್ನು ಕೆಳಗೆ ಇಳಿಯುವಂತೆ ಸೂಚನೆ ನೀಡಿದ ಕಂಡಕ್ಟರ್ ಜತೆ ವಿದ್ಯಾರ್ಥಿಗಳ ನಡುವೆ ವಾಗ್ವಾದ ಉಂಟಾಯಿತು. ಈ ವೇಳೆ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ಮಾಡಿದ ಘಟನೆ ಹೊಸ ಬಸ್ ನಿಲ್ದಾಣದಲ್ಲಿ ಬುಧವಾರ ನಡೆದಿದೆ.

ಸಾರಿಗೆ ಬಸ್ ಕಂಡಕ್ಟರ್ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನೂರಾರು ವಿದ್ಯಾರ್ಥಿಗಳು ನಗರದ ಚನ್ನಪಟ್ಟಣದಲ್ಲಿರುವ ಹೊಸ ಬಸ್ ನಿಲ್ದಾಣದಲ್ಲಿ ಘೋಷಣೆ ಕೂಗಿ ಪ್ರತಿಭಟಿಸಿದರು. ವಿದ್ಯಾರ್ಥಿಗಳಿಂದಲೇ ನಗರ ಸಾರಿಗೆ ಬಸ್ ತುಂಬಿ ಹೋಯಿತು. ಡೋರ್‌ನಲ್ಲಿ ಇರುವವರನ್ನು ಕೆಳಗೆ ಇಳಿಯುವಂತೆ ಕಂಡಕ್ಟರ್ ಸೂಚಿಸಿದರು. ಈ ವೇಳೆ ಬಸ್ ಕಂಡಕ್ಟರ್ ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ಉಂಟಾಯಿತು. ಈ ವೇಳೆ ಕಂಡಕ್ಟರ್‌ನಿಂದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಲಾಗಿದೆ ಎಂದು ದೂರಿದರು.

ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆಗೆ ಮುಂದಾದರು. ಈ ವೇಳೆ ಬಸ್ ನಿಲ್ದಾಣದಲ್ಲಿ ಕೆಲ ಸಮಯ ಬಸ್ ಸಂಚಾರ ಅಸ್ತವ್ಯಸ್ತವಾಯಿತು. ಕಂಡಕ್ಟರ್ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ಹೆಚ್ಚಿನ ಸಮಯ ನಡೆಯಿತು. ಕೂಡಲೇ ಸ್ಥಳಕ್ಕೆ ಬಂದ ಡಿಪೋ ಮ್ಯಾನೇಜರ್ ಪ್ರಕಾಶ್ ಅವರು ಕೂಡಲೇ ಹೆಚ್ಚುವರಿ ಬಸ್ ಬಿಡಿಸಿ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿದ ಕಳುಹಿಸಿದರು. ಮುನ್ನೆಚ್ಚರಿಕ ಕ್ರಮವಾಗಿ ಸ್ಥಳಕ್ಕೆ ಪೊಲೀಸರು ಆಗಮಿಸಿ ಘರ್ಷಣೆ ತಿಳಿಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net