ಹಳಿ ತಪ್ಪಿದ ಗೂಡ್ಸ್ ರೈಲು, ತಪ್ಪಿದ ಭಾರೀ ಅನಾಹುತ

1666586083599
Published on

ವಿಜಯಪುರ: ಚಲಿಸುತ್ತಿದ್ದ ಗೂಡ್ಸ್ ರೈಲಿನ ಬೋಗಿಗಳ ನಡುವಿನ ಸಂಪರ್ಕ ಕಡಿತಗೊಂಡ ಪರಿಣಾಮ ಆರು ಬೋಗಿಗಳು ಉರುಳಿಬಿದ್ದಿವೆ.

ಜಿಲ್ಲೆಯ ಕೊಲ್ಹಾರ ಪಟ್ಟಣದ ಮುಳವಾಡ ರೈಲು ‌ನಿಲ್ದಾಣ ಬಳಿ ಈ ಘಟನೆ ನಡೆದಿದೆ. ಸೊಲ್ಲಾಪುರದಿಂದ ವಿಜಯಪುರ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟಿದ್ದ ರೈಲಿನ ಟ್ರ್ಯಾಕ್ ಕಟ್ ಆಗಿದೆ. ಗೂಡ್ಸ್ ರೈಲಾಗಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ವಿಜಯಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅವಘಡದಿಂದಾಗಿ ಇಂದು ಈ ಮಾರ್ಗವಾಗಿ ಸಂಚರಿಸಲಿದ್ದ ಆರು ರೈಲುಗಳ ಸಂಚಾರ ಸ್ಥಗಿತ ಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net