ಹಳೆಯ ವಿದ್ಯಾರ್ಥಿಗಳ ಸಂಘದ ಸಭೆ 3ಕ್ಕೆ

suryakanth shetakar
Published on

ಬೀದರ್: ಕರ್ನಾಟಕ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಕಾಲೇಜು ಸಭಾಂಗಣದಲ್ಲಿ ಸಂಘದ ವಾರ್ಷಿಕ ಮಹಾಸಭೆ ಸೆ.3ರಂದು ಬೆಳಗ್ಗೆ 10ಕ್ಕೆ ಹಮ್ಮಿಕೊಳ್ಳಲಾಗಿದೆ.
ಸಂಘವು ಕಾಲೇಜಿನ ಏಳಗೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸುತ್ತಿದೆ. ಕಲಿತ ಶಾಲೆ, ಕಲಿಸಿದ ಗುರು ಹಾಗೂ ಮುಂದಿನ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ನಿಸ್ವಾರ್ಥದಿಂದ ಸೇವೆ ಸಲ್ಲಿಸುತ್ತಿದೆ. ಹೀಗಾಗಿ ಕಾಲೇಜಿನ ಎಲ್ಲ ಹಳೆಯ ವಿದ್ಯಾರ್ಥಿಗಳು ಮಹಾಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅಧ್ಯಕ್ಷ ಸೂರ್ಯಕಾಂತ ಶೆಟಕಾರ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net