ಹಳೆವೂರನಲ್ಲಿ ಬೈಕ್​ಗಳ ನಡುವೆ ಅಪಘಾತ

Published on

ಹುಲಿಯೂರುದುರ್ಗ: ಕುಣಿಗಲ್​ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಹಳೆವೂರು ಗ್ರಾಮದ ರಸ್ತೆಯಲ್ಲಿ ಭಾನುವಾರ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ನಿಂಗಿಕೊಪ್ಪಲು ಗ್ರಾಮದ ಸತೀಶ್​ (30) ಮೃತಪಟ್ಟಿದ್ದಾನೆ. ಗಾಯಗೊಂಡಿದ್ದ ಸತೀಶ್​ನನ್ನು ಸ್ಥಳಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ಳೂರು ಕ್ರಾಸ್​ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸತೀಶ್​ ಮೃತಪಟ್ಟಿದ್ದಾರೆ.

ಹುಲಿಯೂರುದುರ್ಗ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net