ಹಳೇ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ

20-GPT-1
Published on

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಸರ್ಕಾರಿ ಶಾಲೆಯ ಹಳೇ ವಿದ್ಯಾರ್ಥಿಗಳು ಹಾಗೂ ಭಗತ್ ಸಿಂಗ್ ಯುವಕ ಸಂಘದ ಸದಸ್ಯರು ಶಾಲಾವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.


ಶಾಲಾವರಣದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿದ ಸುಮಾರು 25ಕ್ಕೂ ಹೆಚ್ಚಿನ ಯುವಕರು ದೇಶಕ್ಕೆ ಸ್ವಾತಂತ್ರ್ಯ ಬಂದ ಅಮೃತ ಮಹೋತ್ಸವದ ಅಂಗವಾಗಿ ಈ ಬಾರಿ ಆಗಸ್ಟ್ 15ರಂದು ಶಾಲಾವರಣದಲ್ಲಿ ನಡೆಸುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂಭಮದಿಂದ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net