

ಹನೂರು: ಸಮೀಪದ ಆರ್.ಎಸ್.ದೊಡ್ಡಿ ಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ತೆರಳುವ ಮುಖ್ಯ ರಸ್ತೆ ಬದಿಯ ಹಳ್ಳಕ್ಕೆ ಗುರುವಾರ ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಬಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಬೆಂಗಳೂರು ಮೂಲದ ಅಭಿನಯ (24), ಆರ್ಯ (28) ಗಾಯಗೊಂಡವರು. ಸ್ನೇಹಿತರ ಜತೆ ಮಧ್ಯಾಹ್ನ 12ರ ವೇಳೆಯಲ್ಲಿ ಮ.ಬೆಟ್ಟಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಎಡ ಬದಿಯಲ್ಲಿ ತೆರಳುತ್ತಿದ್ದ ಕಾರು ಬಲ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಇದರಿಂದ ಕಾರು ಜಖಂಗೊಡಿದ್ದು ಇಬ್ಬರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಸ್ಥಳಕ್ಕಾಗಮಿಸಿದ ಹನೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.