

ಗುಡಿಬಂಡೆ: ಕರೊನಾ 2ನೇ ಅಲೆ ನಿಯಂತ್ರಣಕ್ಕಾಗಿ ತಾಲೂಕು ಆರೋಗ್ಯ ಇಲಾಖೆ ಕಸರತ್ತು ನಡೆಸುತ್ತಿದ್ದು, ವಿವಿಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಸೋಂಕು ನಿಯಂತ್ರಣಕ್ಕಾಗಿ ಹಳ್ಳಿ ಹಳ್ಳಿಗೂ ತೆರಳಿ ಕರೊನಾ ಲಸಿಕೆ ನೀಡಲು ಇಲಾಖೆ ತಂಡ ಸಿದ್ಧವಾಗಿದೆ. ತಾಲೂಕಿನಲ್ಲಿ 45 ವರ್ಷ ಮೇಲ್ಪಟ್ಟವರ ಸಂಖ್ಯೆ ಹೆಚ್ಚಾಗಿದಗ್ದು, ಕೆಲವರು ಸ್ವಯಂ ಪ್ರೇರಿತರಾಗಿ ಲಸಿಕೆ ಪಡೆಯುತ್ತಿದ್ದಾರೆ.
ಗುಡಿಬಂಡೆ ಪಟ್ಟಣದಲ್ಲಿ 2 ಕಡೆ ಹಾಗೂ ತಾಲೂಕಿನ 8 ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಿಗೆ ಆರೋಗ್ಯ ಇಲಾಖೆ ತಂಡ ತೆರಳಿ 45 ವರ್ಷ ಮೇಲ್ಪಟ್ಟವರಿಗೆ ಕೋವ್ಯಾಕ್ಸಿನ್ ಲಸಿಕೆ ನೀಡುತ್ತಿದೆ. ಇದಕ್ಕಾಗಿ ತಾಲೂಕಿನಲ್ಲಿ 10 ಕೇಂದ್ರಗಳನ್ನು ತೆರೆಯಲಾಗಿದ್ದು, 11,740 ಜನರಿಗೆ ಈಗಾಗಲೇ ಲಸಿಕೆ ನೀಡುವಲ್ಲಿ ಯಶಸ್ವಿಯಾಗಿದ್ದೇವೆ.
ಇನ್ನು ತಾಲೂಕಿನ ಉಲ್ಲೋಡು ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಗ್ರಾಪಂ ಸಿಬ್ಬಂದಿ ಮನೆಮನೆಗೆ ತೆರಳಿ ಕರೊನಾ ಜಾಗೃತಿ ಮೂಡಿಸಿ, ಲಸಿಕೆ ಪಡೆಯುವಂತೆ ಜನರಿಗೆ ಅರಿವು ಮೂಡಿಸುತ್ತಿದ್ದಾರೆ.
ಸಾರ್ವಜನಿಕರು ಲಸಿಕೆ ಪಡೆಯುವ ಜತೆಗೆ ಪರಸ್ಪರ ಅಂತರ, ಕಡ್ಡಾಯ ಮಾಸ್ಕ್ ಧರಿಸುವ ಮೂಲಕ ಸೋಂಕಿನಿಂದ ರಕ್ಷಣೆ ಪಡೆಯಬೇಕು ಎಂದು ಗುಡಿಬಂಡೆ ಆರೋಗ್ಯ ಅಧಿಕಾರಿ ಡಾ.ನರಸಿಂಹಮೂರ್ತಿ ತಿಳಿಸಿದ್ದಾರೆ.
ಲಕ್ಷ್ಮೀನಾರಾಯಣ, ಗ್ರಾಮ ಲೆಕ್ಕಾಧಿಕಾರಿ , ಉಲ್ಲೋಡುಕರೊನಾ 2ನೇ ಅಲೆ ಎದುರಿಸಲು ತಾಲೂಕಿನಲ್ಲಿ ಸಾಕಷ್ಟು ತಯಾರಿ ಮಾಡಲಾಗಿದೆ. ತಹಸೀಲ್ದಾರ್ ಸಿಗ್ಬತ್ ಉಲ್ಲಾ ಮಾರ್ಗದರ್ಶನದಲ್ಲಿ ಹಳ್ಳಿ ಹಳ್ಳಿಗೆ ತೆರಳಿ ಲಸಿಕೆ ಪಡೆಯುವಂತೆ ಮನವರಿಕೆ ಮಾಡಲಾಗುತ್ತಿದೆ.