ಹಳ್ಳಿಗಳ ಅಭಿವೃದ್ಧಿಗೆ ನರೇಗಾ ಬಲ

24.07.2020 SDLP 01
Published on

ಶಿಡ್ಲಘಟ್ಟ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಹಕಾರಿಯಾಗಿದೆ ಎಂದು ಜಿಪಂ ಸಿಇಒ ೌಜೀಯಾ ತರನ್ನುಮ್ ಅಭಿಪ್ರಾಯಪಟ್ಟರು.

ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಭೇಟಿ ನೀಡಿ ನರೇಗಾ ಯೋಜನೆಯ ಕಾಮಗಾರಿಗಳು ಹಾಗೂ ಕರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು.ಯೋಜನೆಯಡಿ ದೊರೆಯುವ ಸೌಲಭ್ಯಗಳು ಮತ್ತು ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಈಗಾಗಲೇ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಜಾಗೃತಿ ಮತ್ತು ಅರಿವು ಮೂಡಿಸಲಾಗಿದೆ ಎಂದರು.

ಯೋಜನೆಯಲ್ಲಿ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸಲಾಗಿದೆ, ಜತೆಗೆ ಪೂರ್ವ ಪ್ರಾಥಮಿಕ ಶಿಕ್ಷಣದ ವ್ಯವಸ್ಥೆ ಬಲಗೊಳಿಸಲು ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಪ್ರಥಮ ಆದ್ಯತೆ ನೀಡಲಾಗಿದೆ ಎಂದರು.

ಅಂರ್ತಜಲಮಟ್ಟ ವೃದ್ಧಿಗೊಳಿಸಲು ಕಲ್ಯಾಣಿಗಳು, ಕರೆ-ಕುಂಟೆಗಳನ್ನು ಅಭಿವೃದ್ಧಿ, ಬದುಗಳು, ಇಂಗುಗುಂಡಿಗಳ ನಿರ್ಮಾಣ, ಶಾಲಾ ಆವರಣ ಮತ್ತು ಸರ್ಕಾರಿ ಕಚೇರಿಗಳಲ್ಲಿ ಮಳೆನೀರು ಕೊಯ್ಲು ಪದ್ಧತಿ ಅಳವಡಿಕೆ, ಕೈಗೊಳ್ಳಲಾಗಿದೆ. ಆಟದ ಮೈದಾನಗಳ ಅಭಿವೃದ್ಧಿ, ಉದ್ಯಾನವನಗಳನ್ನು ನಿರ್ಮಿಸಲಾಗಿದೆ ಎಂದರು.ತಾಪಂ ಇಒ ಬಿ.ಶಿವಕುಮಾರ್, ಕುಂದಲಗುರ್ಕಿ ಗ್ರಾಪಂ ಪಿಡಿಒ ಶ್ರೀನಿವಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net